ಶ್ರೀನಗರ ಎನ್'ಕೌಂಟರ್: ಬಟಮಾಲೂದಲ್ಲಿ 2 ಉಗ್ರರ ಬಂಧನ
ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಬಟಮಾಲೂ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಬಂಧನಕ್ಕೊಳಪಡಿಸಿವೆ ಎಂದು ಭಾನುವಾರ ತಿಳಿದುಬಂದಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಬಟಮಾಲೂ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಬಂಧನಕ್ಕೊಳಪಡಿಸಿವೆ ಎಂದು ಭಾನುವಾರ ತಿಳಿದುಬಂದಿದೆ.
ಬಟಮಾಲೂ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸುತ್ತಿದೆ. ಎನ್ ಕೌಂಟರ್ ನಡೆಸುತ್ತಿರುವ ಸ್ಥಳದಲ್ಲಿ ಇದೀಗ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಬಂಧನಕ್ಕೊಳಪಡಿಸಿದ್ದು, ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.
ಎನ್'ಕೌಂಟರ್ ವೇಳೆ ಉಗ್ರರಿಗೆ ಗಾಯಗಳಾಗಿದ್ದು, ಸ್ಥಳದಲ್ಲಿ ಮತ್ತಷ್ಟು ಉಗ್ರರಿರುವ ಶಂಕೆಗಳು ಮೂಡಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Arrestಉಗ್ರರುಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and KashmirencounterterroristಬಂಧನBatamalooಎನ್\'ಕೌಂಡರ್ಬಟಮಾಲೂ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


