ಶ್ರೀನಗರದಲ್ಲಿ ಎನ್'ಕೌಂಟರ್: ಓರ್ವ ಪೊಲೀಸ್ ಹುತಾತ್ಮ, 3 ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಶ್ರೀನಗದಲ್ಲಿರುವ ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರ ದಾಳಿ ನಡೆಸಿದ್ದು, ಈ ಹಿನ್ನಲೆಯಲ್ಲ ಉಗ್ರರ ವಿರುದ್ಧ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸುತ್ತಿದೆ ಎಂದು ಭಾನುವಾರ ತಿಳಿದುಬಂದಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗದಲ್ಲಿರುವ ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರ ದಾಳಿ ನಡೆಸಿದ್ದು, ಈ ಹಿನ್ನಲೆಯಲ್ಲ ಉಗ್ರರ ವಿರುದ್ಧ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸುತ್ತಿದೆ ಎಂದು ಭಾನುವಾರ ತಿಳಿದುಬಂದಿದೆ.
ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿವೆ. ಈ ವೇಳೆ ಉಗ್ರರು ಇದ್ದಕ್ಕಿದ್ದಂತೆಯೇ ಸೇನೆಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ವೇಳೆ ಉಗ್ರರ ಅಡಗಿರುವ ತಾಣವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ವಿರುದ್ಧ ಎನ್ ಕೌಂಟರ್ ನಡೆಸಲು ಮುಂದಾಗಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್ ಪೇದೆ ಹುತಾತ್ಮರಾಗಿದ್ದು, ಮೂವರು ಸಿಆರ್'ಪಿಎಫ್ ಯೋಧರಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉಗ್ರರುಶ್ರೀನಗರSrinagarterroristsಜಮ್ಮು ಮತ್ತು ಕಾಶ್ಮೀರArmyJammu and Kashmirencounterಸೇನೆಎನ್\'ಕೌಂಟರ್Batamaloo areaಬಟಾಮಲೂ ಪ್ರದೇಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


