ರಾಖಿ, ಗಣೇಶ ಮೂರ್ತಿಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ: ಹಣಕಾಸು ಸಚಿವ
ರಕ್ಷಾ ಬಂಧನ, ಗಣೇಶ ಉತ್ಸವಗಳು ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಖಿ ಹಾಗೂ ಗಣೇಶ ಮೂರ್ತಿಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಭಾನುವಾರ ಹೇಳಿದ್ದಾರೆ...

Published On :
ನವದೆಹಲಿ: ರಕ್ಷಾ ಬಂಧನ, ಗಣೇಶ ಉತ್ಸವಗಳು ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಖಿ ಹಾಗೂ ಗಣೇಶ ಮೂರ್ತಿಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಭಾನುವಾರ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಕ್ಷಾ ಬಂಧನ ಹತ್ತಿರ ಬರುತ್ತಿದೆ. ಹೀಗಾಗಿ ರಾಖಿಗಳ ಮೇಲಿನ ಜಿಎಸ್'ಟಿ ಹಾಗೂ ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಎಲ್ಲಾ ರೀತಿಯ ಮೂರ್ತಿಗಳು, ಕರಕುಶಲ ವಸ್ತುಗಳು, ಕೈಮಗ್ಗದ ಮೇಲಿನ ತೆರಿಗೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ರಕ್ಷಾ ಬಂಧನ ಹಾಗೂ ಗಣೇಶ ಉತ್ಸವ ನಮ್ಮ ಪರಂಪರೆಯಾಗಿದೆ. ಇವೆಲ್ಲವನ್ನೂ ನಾವು ಬಹಳ ಗೌರವಯುತವಾಗಿ ನಡೆಸಿಕೊಂಡು ಹೋಗಬೇಕಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


