ದೇಶ

ಕೇರಳ ಆಯ್ತು, ಈಗ ಹಿಮಾಚಲ ಪ್ರದೇಶ ಸರದಿ; ಭಾರಿಮಳೆ, ಶಾಲಾ ಕಾಲೇಜುಗಳಿಗೆ ರಜೆ

ಕೇರಳದಲ್ಲಿ ಮುಂಗಾರು ಮಳೆ ಅಬ್ಬರ ಇನ್ನೂ ಮುಂದುವರೆದಿರುವಂತೆಯೇ ಇತ್ತ ಹಿಮದ ನಾಡು ಹಿಮಾಚಲ ಪ್ರದೇಶದಲ್ಲೂ ಭಾರಿ ಮಳೆ ಅವಾಂತರ ಸೃಷ್ಟಿ ಮಾಡಿದೆ.

ಕೇರಳ ಆಯ್ತು, ಈಗ ಹಿಮಾಚಲ ಪ್ರದೇಶ ಸರದಿ; ಭಾರಿಮಳೆ, ಶಾಲಾ ಕಾಲೇಜುಗಳಿಗೆ ರಜೆ
ಸಂಗ್ರಹ ಚಿತ್ರ
Published On :
ಶಿಮ್ಲಾ: ಕೇರಳದಲ್ಲಿ ಮುಂಗಾರು ಮಳೆ ಅಬ್ಬರ ಇನ್ನೂ ಮುಂದುವರೆದಿರುವಂತೆಯೇ ಇತ್ತ ಹಿಮದ ನಾಡು ಹಿಮಾಚಲ ಪ್ರದೇಶದಲ್ಲೂ ಭಾರಿ ಮಳೆ ಅವಾಂತರ ಸೃಷ್ಟಿ ಮಾಡಿದೆ.
ನಿನ್ನೆಯಿಂದ ಎಡೆ-ಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಲ್ಲಲ್ಲಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದೆ. ಮತ್ತೆರಡು ದಿನಗಳ ಕಾಲ ರಾಜ್ಯದಲ್ಲಿ ಭಾರಿಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಎಚ್ಟರಿಕೆ ನೀಡಿದೆ. ಈ ಹಿನ್ನಲೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಇಂದು ಶಿಮ್ಲಾ ಮತ್ತು ಮಂಡಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇನ್ನು ಭಾರಿಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಭೂಕುಸಿತ ಕೂಡ ಸಂಭವಿಸಿದ್ದು, ರಾಷ್ಟೀಯ ಹೆದ್ದಾರಿ ಸಂಖ್ಯೆ 3ರಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಭಾರಿ ಪ್ರಮಾಣದ ಕಲ್ಲು ಮತ್ತು ಮಣ್ಣು ಚಂಡೀಘಡ್-ಮನಾಲಿ ಹೆದ್ದಾರಿಯಲ್ಲಿ ಬಿದ್ದಿದ್ದು, ತಾತ್ಕಾಲಿಕವಾಗಿ ಹೆದ್ದಾರಿ ಬಂದ್ ಆಗಿದೆ. ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಮಳೆಗಾಲದಲ್ಲಿ ಹಿಮಾಚಲ ಪ್ರದೇಶದ ಗುಡ್ಡಗಾಡು ನಿವಾಸಿಗಳಿಗೆ ಸರ್ಕಾರ ಎಚ್ಚರಿಕೆ ನೀಡಿದ್ದು, ಭೂಕುಸಿತದ ಕುರಿತು ಎಚ್ಚರಿದಿಂದ ಇರುವಂತೆ ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.