ಪಿಎನ್ ಬಿ ಹಗರಣ: ಮಾಜಿ ಎಂಡಿ ಉಷಾ ಅನಂತಸುಬ್ರಹ್ಮಣ್ಯನ್ ಸೇವೆಯಿಂದ ವಜಾ
ಬಹುಕೋಟಿ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪಿಎನ್ ಬಿ ಮಾಜಿ ...

Published On :
ನವದೆಹಲಿ: ಬಹುಕೋಟಿ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪಿಎನ್ ಬಿ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಉಷಾ ಅನಂತಸುಬ್ರಹ್ಮಣ್ಯನ್ ಅವರನ್ನು ಸೇವೆಯಿಂದ ಸೋಮವಾರ ವಜಾಗೊಳಿಸದೆ.
14 ಸಾವಿರ ಕೋಟಿ ರುಪಾಯಿ ಪಿಎನ್ ಬಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಹಿಂದಷ್ಟೇ ಉಷಾ ಅವರನ್ನು ಅಲಹಬಾದ್ ಬ್ಯಾಂಕ್ ಮತ್ತು ಪಿಎನ್ ಬಿಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಆದರೆ ಬ್ಯಾಂಕ್ ಉದ್ಯೋಗಿಯಾಗಿ ಮುಂದುವರೆದಿದ್ದರು.
ಉಷಾ ಅನಂತಸುಬ್ರಹ್ಮಣ್ಯನ್ ಇಂದು ಸೇವೆಯಿಂದಲೇ ವಜಾಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪಿಎನ್ ಬಿ ಹಗರಣಕ್ಕೆ ಸಂಬಂಧಿಸಿದತೆ ಕಳೆದ ಮೇ ತಿಂಗಳಲ್ಲಿ ಸಿಬಿಐ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ, ವಜ್ರ ವ್ಯಾಪಾರಿ ನೀರವ್ ಮೋದಿ, ಮೆಹುಲ್ ಚೋಕ್ಸಿ ಹಾಗೂ ಉಷಾ ಸುಬ್ರಹ್ಮಣ್ಯನ್ ಸೇರಿದಂತೆ ಮೂವರು ಅಧಿಕಾರಿಗಳ ಹೆಸರಿದೆ.
ವಂಚನೆ ನಡೆದ ಸಮಯದಲ್ಲಿ ಪಿಎನ್ ಬಿ ಬ್ಯಾಂಕ್ ನಿರ್ದೆಶಕಿಯಾಗಿದ್ದ ಅಲಹಾಬಾದ್ ಬ್ಯಾಂಕ್ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಉಷಾ ಅನಂತಸುಬ್ರಹ್ಮಣ್ಯನ್, ಪಿಎನ್ ಬಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕೆ.ವಿ. ಬ್ರಹ್ಮಾಜಿ ರಾವ್ ಮತ್ತು ಸಂಜೀವ್ ಶರ್ಮ ಅವರನ್ನು ಚಾರ್ಜ್ ಶೀಟ್ ನಲ್ಲಿ ಹೆಸರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


