ಹಾಪುರ್ ಸಾಮೂಹಿಕ ಹಲ್ಲೆ ಪ್ರಕರಣ: ಉತ್ತರ ಪ್ರದೇಶ ಪೊಲೀಸರಿಗೆ 'ಸುಪ್ರೀಂ' ನೋಟಿಸ್
ಹಾಪುರ್ ಸಾಮೂಹಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

Published On :
ಲಖನೌ: ಹಾಪುರ್ ಸಾಮೂಹಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಂತ್ರಸ್ತ ಸಮಿ ಉದ್ದೀನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ ಮೀರತ್ ಸೂಪರಿಂಟೆಂಡ್ ಮತ್ತು ಐಜಿಪಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ.
ಹಾಪುರ್ ಸಾಮೂಹಿಕ ಹಲ್ಲೆ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ನಡೆಸಿ 2 ವಾರಗಳಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ಹೇಳಿದೆ.
ಇನ್ನು ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದ ಮಾಂಸ ಮಾರಾಟಗಾರ ಸಮಿಉದ್ದೀನ್ ಅವರು, ಸಾಮೂಹಿಕ ಹಲ್ಲೆ ಪ್ರಕರಣ ಸಂಬಂಧ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದರು. ಅಲ್ಲದೆ ತಮ್ಮ ಜೀವಕ್ಕೂ ಬೆದರಿಕೆ ಇದೆ ಎಂದು ಕೋರ್ಟ್ ಬಳಿ ಆಲವತ್ತುಕೊಂಡಿದ್ದರು. ಈ ಹಿನ್ನಲೆಯಲ್ಲಿ ಕೋರ್ಟ್ ಸಂತ್ರಸ್ಥ ವ್ಯಕ್ತಿಗೂ ಭದ್ರತೆ ನೀಡುವಂತೆ ಮೀರತ್ ಪೊಲೀಸರಿಗೆ ಸೂಚಿಸಿದೆ.
ಕಳೆದ ಜೂನ್ 18ರಂದು ವಾಹನದಲ್ಲಿ ತೆರಳುತ್ತಿದ್ದ ಸಮಿ ಉದ್ದೀನ್ ಮತ್ತ ಆತನ ಸ್ನೇಹಿತನ ಮೇಲೆ ಗುಂಪೊಂದು ದಿಢೀರ್ ದಾಳಿ ಮಾಡಿತ್ತು, ಗೋವುಗಳನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿತ್ತು. ಈ ವೇಳೆ ಖುರೇಶಿ ಎಂಬ ವ್ಯಕ್ತಿ ಸಾವನ್ನಪ್ಪಿದ್ದರು. ಅಂತೆಯೇ ಸಮಿಉದ್ದೀನ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ತಮ್ಮ ಮೇಲಿನ ಹಲ್ಲೆ ವಿರುದ್ಧ ಸಮಿ ಉದ್ದೀನ್ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Uttar pradeshಉತ್ತರ ಪ್ರದೇಶಲಖನೌLucknowHapur lynching caseಹಾಪುರ್ ಸಾಮೂಹಿಕ ಹಲ್ಲೆ ಪ್ರಕರಣ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


