ದೇಶ

ಛತ್ತೀಸ್ ಗಡ ರಾಜ್ಯಪಾಲ ಬಲರಾಮ್ ದಾಸ್ ಟಂಡನ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ತ್ತೀಸ್ ಗಡ ರಾಜ್ಯಪಾಲ ಬಲರಾಮ್ ದಾಸ್ ಟಂಡನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ರಾಜಧಾನಿಯ ಅಂಬೇಡ್ಕರ್ ಆಸ್ಪತ್ರೆಗೆ ..

ಛತ್ತೀಸ್ ಗಡ ರಾಜ್ಯಪಾಲ ಬಲರಾಮ್ ದಾಸ್ ಟಂಡನ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು
ಛತ್ತೀಸ್ ಗಡ ರಾಜ್ಯಪಾಲ ಬಲರಾಮ್ ದಾಸ್ ಟಂಡನ್
Published On :
ರಾಯ್ ಪುರ: ಛತ್ತೀಸ್ ಗಡ ರಾಜ್ಯಪಾಲ ಬಲರಾಮ್ ದಾಸ್ ಟಂಡನ್  ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ರಾಜಧಾನಿಯ  ಅಂಬೇಡ್ಕರ್  ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಂಡನ್ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದರು ಎಂದು ರಾಜಭವನ ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆ ಅವರ ಆರೋಗ್ಯ ಸಮಸ್ಯೆ ತೀವ್ರವಾಗಿ ಉಲ್ಬಣಗೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. 
ರಾಜ್ಯಪಾಲರಿಗೆ ಹೃದಯಾಘಾತವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ, ಅವರ ಆರೋಗ್ಯ ಗಂಭೀರವಾಗಿದ್ದು, ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ರಾಜ್ಯಪಾಲರಿಗೆ ಚಿಕಿತ್ಸೆ ಮುಂದುವರಿದಿದ್ದು, ಇದುವರೆಗೂ ಯಾವುದೇ ಮೆಡಿಕಲ್ ಬುಲೆಟಿನ್ ಬಿಡುಗಡೆಯಾಗಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.