ಎಂ.ಕೆ.ಸ್ಟಾಲಿನ್ ಗೆ ಡಿಎಂಕೆ ಕಾರ್ಯಕಾರಿ ಸಮಿತಿಯ ಬೆಂಬಲ
ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಪಕ್ಷದ ಅಧ್ಯಕ್ಷರಾಗಲು ಡಿಎಂಕೆ ಕಾರ್ಯಕಾರಿ ಸಮಿತಿ ಮಂಗಳವಾರ...

Published On :
ಚೆನ್ನೈ: ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಪಕ್ಷದ ಅಧ್ಯಕ್ಷರಾಗಲು ಡಿಎಂಕೆ ಕಾರ್ಯಕಾರಿ ಸಮಿತಿ ಮಂಗಳವಾರ ಸಂಪೂರ್ಣ ಬೆಂಬಲ ನೀಡಿದೆ.
ಪಕ್ಷದ ಮುಖ್ಯ ಕಚೇರಿಯಲ್ಲಿ ಇಂದು ನಡೆದ ತುರ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರಿಗೆ ಸಂತಾಪ ಸೂಚನೆ ನಿರ್ಣಯ ಅಂಗೀಕರಿಸಲಾಯಿತು.
ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿರುವ ಸ್ಟಾಲಿನ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ದೊರೈಮುರಗನ್ ಹಾಗೂ ಟಿಆರ್ ಬಾಲು ಸೇರಿದಂತೆ ಹಲವು ನಾಯಕರು ಮಾತನಾಡಿದರು. ಅಲ್ಲದೆ ಸ್ಟಾಲಿನ್ ಅವರೇ ಪಕ್ಷದ ನೇತೃತ್ವ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಪಕ್ಷದ ಕಾರ್ಯಾಧ್ಯಕ್ಷರೇ ನಮ್ಮ ಪಕ್ಷದ ಅಧ್ಯಕ್ಷರಾಗಬೇಕು ಎಂದು ದೊರೈಮುರಗನ್ ಅವರು ಹೇಳಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಟಿಆರ್ ಬಾಲು ಅವರು, ನಮ್ಮ ಸೈನ್ಯದ ಕಮಾಂಡರ್ ನಮ್ಮನ್ನು ಅಗಲಿದ್ದಾರೆ. ಮುಂದಿನ ಕಮಾಂಡರ್ ಯಾರು ಅಂತ ಯಾರೂ ಹೇಳುತ್ತಿಲ್ಲ. ಆದರೆ ಕಮಾಂಡರ್ ಆಗುವ ಅರ್ಹತೆ ಸ್ಟಾಲಿನ್ ಗೆ ಇದೆ ಎಂದರು.
ಇನ್ನು ಈ ವೇಳೆ ಮಾತನಾಡಿದ ಸ್ಟಾಲಿನ್ ಅವರು, ಪಕ್ಷ ಉತ್ತಮ ನಾಯಕನನ್ನು ಕಳೆದುಕೊಂಡಿದ್ದರೆ ನಾನು ನಾಯಕ ಮತ್ತು ಅಪ್ಪ ಎರಡನ್ನೂ ಕಳೆದುಕೊಂಡಿದ್ದೇನೆ. ಅವರು ತಮ್ಮ ಉಸಿರಿನ ಕೊನೆ ಹಂತದಲ್ಲಿದ್ದಾಗ ಅವರ ಇಚ್ಛೆಯಂತೆ ಅವರನ್ನು ಮರೀನಾ ಬೀಚ್ ನಲ್ಲಿ ಸಮಾಧಿ ಮಾಡಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿಗಳ ಕೈ ಹಿಡಿದು ಬೇಡಿಕೊಂಡಿದ್ದೆ. ಆದರೆ ಸರ್ಕಾರ ಅವಕಾಶ ನೀಡಿರಲಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


