ಛತ್ತೀಸ್ ಗಢ ರಾಜ್ಯಪಾಲರಾಗಿ ಆನಂದಿ ಬೆನ್ ಗೆ ಹೆಚ್ಚುವರಿ ಹೊಣೆಗಾರಿಕೆ: ರಾಷ್ಟ್ರಪತಿ ಆದೇಶ
ಮಧ್ಯಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಅವರರಿಗೆ ಹೆಚ್ಚುವರಿ ಹೊಣೆಗಾರಿಕೆಯಾಗಿ ಛತ್ತೀಸ್ ಗಢರಾಜ್ಯಪಾಲರ ಹುದ್ದೆ ನೀಡಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಇಂದು ಪ್ರಕಟಣೆ ಹೊರಡಿಸಿದ್ದಾರೆ.

Published On :
ನವದೆಹಲಿ: ಮಧ್ಯಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಅವರರಿಗೆ ಹೆಚ್ಚುವರಿ ಹೊಣೆಗಾರಿಕೆಯಾಗಿ ಛತ್ತೀಸ್ ಗಢ ರಾಜ್ಯಪಾಲರ ಹುದ್ದೆ ನೀಡಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಇಂದು ಪ್ರಕಟಣೆ ಹೊರಡಿಸಿದ್ದಾರೆ.
ಛತ್ತೀಸ್ ಗಢ ರಾಜ್ಯಪಾಲರಾಗಿದ್ದ ಬಲರಾಮ್ ದಾಸ್ ಟಂಡನ್ ನಿಧನರಾದ ಹಿನ್ನೆಲೆಯಲ್ಲಿ ಆನಂದಿ ಬೆನ್ ಈ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ರಾಜ್ಯಕ್ಕೆ ಹೊಸ ರಾಜ್ಯಪಾಲರ ಅಧಿಕೃತ ನೇಮಕವಾಗುವವರೆಗೆ ಆನಂದಿ ಬೆನ್ ಪಟೇಲ್ ಹೆಚ್ಚುವರಿ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆ ತಿಳಿಸಿದೆ.
ಜನಸಂಘ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಬಲರಾಮ್ ಜಿ ದಾಸ್ ಟಂಡನ್ 2014ರ ಜುಲೈನಲ್ಲಿ ಛತ್ತೀಸ್ ಗಢದ ರಾಜ್ಯಪಾಲರನ್ನಾಗಿ ನೇಮಕವಾಗಿದ್ದರು.90 ವರ್ಷದ ಟಂಡನ್ ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ChhattisgarhMadhya Pradeshಮಧ್ಯಪ್ರದೇಶAnandiben Patelಛತ್ತೀಸ್ ಗಢಆನಂದಿ ಬೆನ್ ಪಟೇಲ್Balramji Dass Tandonಬಲರಾಮ್ ದಾಸ್ ಟಂಡನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


