2013 ಗಲಭೆ ಪ್ರಕರಣಗಳ ವಾಪಸ್: ಯೋಗಿ ಸರ್ಕಾರದ ನಿರ್ಧಾರಕ್ಕೆ ಮುಜಾಫರ್ ನಗರ ಸ್ಥಳೀಯ ಆಡಳಿತ ವಿರೋಧ!
2013 ರ ಮುಜಾಫರ್ ನಗರ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ವಾಪಸ್ ಪಡೆಯುವ ಸಿಎಂ ಯೋಗಿ ಆದಿತ್ಯನಾಥ್ ಅವರ ನಿರ್ಧಾರಕ್ಕೆ ಮುಜಾಫರ್ ನಗರ ಸ್ಥಳೀಯ ಆಡಳಿತ ತೀವ್ರ ವಿರೋಧ ವ್ಯಕ್ತಪಡಿಸಿದೆ.

Published On :
ಲಖನೌ: 2013 ರ ಮುಜಾಫರ್ ನಗರ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ವಾಪಸ್ ಪಡೆಯುವ ಸಿಎಂ ಯೋಗಿ ಆದಿತ್ಯನಾಥ್ ಅವರ ನಿರ್ಧಾರಕ್ಕೆ ಮುಜಾಫರ್ ನಗರ ಸ್ಥಳೀಯ ಆಡಳಿತ ತೀವ್ರ ವಿರೋಧ ವ್ಯಕ್ತಪಡಿಸಿದೆ.
ವಿರೋಧಕ್ಕೆ ಆಡಳಿತಾತ್ಮಕ ಕಾರಣ ನೀಡಿರುವ ಮುಜಾಫರ್ ನಗರ ಸ್ಥಳೀಯ ಆಡಳಿತ, ಪ್ರಕರಣಗಳ ಬಗ್ಗೆ ಎಲ್ಲಾ ದೃಷ್ಟಿಯಿಂದಲೂ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇವೆ, ಪೊಲೀಸ್ ಹಾಗೂ ಪ್ರಾಸಿಕ್ಯೂಷನ್ ನ ವರದಿಯ ಆಧಾರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ದೃಷ್ಟಿಕೋನಗಳನ್ನು ಹೇಳಿದ್ದೇವೆ ಎಂದು ಜಿಲ್ಲಾ ದಂಡಾಧಿಕಾರಿ ಹೇಳಿದ್ದಾರೆ.
2013 ರ ಮುಜಾಫರ್ ನಗರ ಹಾಗೂ ಶಾಮ್ಲಿಯಲ್ಲಿ ನಡೆದ ಗಲಭೆ ಪ್ರಕರಣಗಳಲ್ಲಿ ಬಿಜೆಪಿ ನಾಯಕರ ಹೆಸರೂ ಕೇಳಿಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Muzaffarnagarಮುಜಾಫರ್ ನಗರYogi Adityanathc2013 riot caseslocal administration2013 ಗಲಭೆ ಪ್ರಕರಣಸ್ಥಳೀಯ ಆಡಳಿತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


