ದೇಶ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಪ್ರಕಟಣೆ

ಳೆದ 24 ಗಂಟೆಗಳಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಇನ್ನಷ್ಟುಕ್ಷೀಣಿಸಿದೆ.ಎಂದು ಬುಧವಾರ ಸಂಜೆ ಬಿಡುಗಡೆಯಾದ ಪತ್ರಿಕಾ ಪ್ರಕಟಣೆಯಲ್ಲಿ....

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಪ್ರಕಟಣೆ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ
Published On :
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಇನ್ನಷ್ಟುಕ್ಷೀಣಿಸಿದೆ.ಎಂದು ಬುಧವಾರ ಸಂಜೆ ಬಿಡುಗಡೆಯಾದ ಪತ್ರಿಕಾ ಪ್ರಕಟಣೆಯಲ್ಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ತಿಳಿಸಿದೆ.
ವಾಜಪೇಯಿ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು ಇದೀಗ ನಿರ್ಣಾಯಕ ಅಹಂತ ತಲುಪಿದೆ.ಸಧ್ಯ ಅವರಿಗೆ ಆಮ್ಲಜನಕದ ಬೆಂಬಲ ನೀಡಲಾಗಿದೆ.ಎಂದು ಪ್ರಕಟಣೆ ಹೇಳಿದೆ.
ಮಧುಮೇಹ, ಮೂತ್ರದ ಸೋಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು.
Story image
ಈ ದಿನ ಸಂಜೆ ಪ್ರಧಾನಿ ನರೇಂದ್ರ ಮೋದಿ ಏಮ್ಸ್ ಗೆ ಭೇಟಿ ನೀಡಿ ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ್ದರು.ಟೆಕ್ಸ್ ಟೈಲ್ಸ್ ಸಚಿವೆ ಸ್ಮೃತಿ ಇರಾನಿ ಹಾಗು ದೆಹಲಿ ಸಂಸದೆ ಮೀನಾಕ್ಷಿ ಲೇಖಿ ಸಹ ಏಮ್ಸ್ ಗೆ ತೆರಳಿ ವಾಜಪೇಯಿ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದಿದ್ದರು.
ಕಳೆದ 9 ವಾರಗಳಿಂದ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಾಜಪೇಯಿ ಅವರನ್ನು ಹಲವು ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷಗಳ ಹಿರಿಯ ಮುಖಂಡರು ಭೇಟಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.