ಕೇರಳ ಪ್ರವಾಹ: ಒಂದೇ ದಿನದಲ್ಲಿ 29 ಸಾವು, 67ಕ್ಕೇರಿದ ಸಾವಿನ ಸಂಖ್ಯೆ
ಕೇರಳದಲ್ಲಿ ಮುಂಗಾರು ಆರ್ಭಟದ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ 29 ಮಂದಿ ಸಾವನ್ನಪ್ಪುವ ಮೂಲಕ ಒಟ್ಟಾರೆ ಸಾವಿನ ಸಂಖ್ಯೆ 67ಕ್ಕೆ ಏರಿಕೆಯಾಗಿದೆ.

Published On :
ಕೊಚ್ಚಿ: ಕೇರಳದಲ್ಲಿ ಮುಂಗಾರು ಆರ್ಭಟದ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ 29 ಮಂದಿ ಸಾವನ್ನಪ್ಪುವ ಮೂಲಕ ಒಟ್ಟಾರೆ ಸಾವಿನ ಸಂಖ್ಯೆ 67ಕ್ಕೆ ಏರಿಕೆಯಾಗಿದೆ.
ಬುಧವಾರ ಮಲಪ್ಪುರಂನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಒಟ್ಟು 11 ಮಂದಿ ಸಾವಿಗೀಡಾಗಿದಿದ್ದಾರೆ. ಕಂಜೂರಿನಲ್ಲಿ ಮಂಗಳವಾರ ಐದು ಮಂದಿ ಮೃತಪಟ್ಟಿದ್ದರು. ಅಂತೆಯೇ ವಿವಿಧೆಡೆ ಸಂಭವಿಸಿದ ದುರಂತಗಳಲ್ಲಿ 9 ಮಂದಿ ಸಾವಿಗೀಡಾಗಿದ್ದು, ಒಟ್ಟಾರೆ ಕೇರಳ ಪ್ರವಾಹದಲ್ಲಿ ಈ ವರೆಗೂ ಬಲಿಯಾದವರ ಸಂಖ್ಯೆ 67ಕ್ಕೆ ಏರಿಕೆಯಾದಂತಾಗಿದೆ.
ಆತಂಕದ ವಿಚಾರವೆಂದರೆ ಈಗಾಗಲೇ ಕೇರಳದ ನದಿಗಳು ಉಕ್ಕಿ ಹರಿಯುತ್ತಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರ ನಡುವೆಯೇ ಮುಂದಿನ ನಾಲ್ಕು ದಿನಗಳವರೆಗೆ ಭಾರಿ ಮಳೆ ಸುರಿಯುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಡೀ ರಾಜ್ಯದಾದ್ಯಂತ ಕಟ್ಟೆಚ್ಚರ (ರೆಡ್ ಅಲರ್ಟ್) ಘೋಷಿಸಲಾಗಿದೆ.
ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪರಿಸ್ಥಿತಿ ನಿಭಾಯಿಸಲು ಸನ್ನದ್ಧ ಸ್ಥಿತಿಯಲ್ಲಿರುವಂತೆ ಎಲ್ಲ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
KeralaThiruvananthapuramಕೇರಳFLOODSತಿರುವನಂತಪುರಂheavy rainಭಾರಿ ಮಳೆಮಾನ್ಸೂನ್ ಮಳೆMansoon rainIdukki damಇಡುಕ್ಕಿ ಡ್ಯಾಂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


