ಮಾಜಿ ಪ್ರಧಾನಿ ವಾಜಪೇಯಿ ವಿಧಿವಶ: ಮಧ್ಯಾಹ್ನ 1ರವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ ನ್ಯಾಯಾಲಯಗಳು
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ಇಹಲೋಕ ತ್ಯಜಿಸುವ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಹಾಗೂ ಇತರೆ ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಶುಕ್ರವಾರ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ತಿಳಿದುಬಂದಿದೆ...

Published On :
ನವದೆಹಲಿ: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ಇಹಲೋಕ ತ್ಯಜಿಸುವ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಹಾಗೂ ಇತರೆ ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಶುಕ್ರವಾರ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ತಿಳಿದುಬಂದಿದೆ.
ವಾಜಪೇಯಿಯವರ ಪಾರ್ಥೀವ ಶರೀರವನ್ನು ಕಷ್ಣ ಮೆನನ್ ಮಾರ್ಗ್ ದಲ್ಲಿರುವ ಅವರ ನಿವಾಸದಿಂದ ಬಿಜೆಪಿ ಕೇಂದ್ರ ಕಚೇರಿಗೆ ಕಂಡೊಯ್ಯಲಾಗಿದ್ದು, ದೆಹಲಿಯ ದೀನ ದಯಾಳ್ ಉಪಾಧ್ಯಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಧ್ಯಾಹ್ನ 1.30ರವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಹೀಗಾಗಿ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಾಜಪೇಯಿಯವರ ಅಂತಿಮ ದರ್ಶನ ಪಡೆಯುವ ಸಲುವಾಗಿ ನ್ಯಾಯಾಲಯದ ಕಾರ್ಯವನ್ನು ಇಂದು ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ನಿಗದಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Delhi High Courtದೆಹಲಿ ಹೈಕೋರ್ಟ್funeralವಾಜಪೇಯಿVajpayeeFunctionಅಂತಿಮ ಯಾತ್ರೆಕಾರ್ಯDistrict courtsಜಿಲ್ಲಾ ನ್ಯಾಯಾಲಯಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


