ಎಬಿ ವಾಜಪೇಯಿ ನಿಧನ: ಅಂತಿಮ ದರ್ಶನ ಪಡೆಯಲು ಬಂದಿದ್ದ ಅಗ್ನಿವೇಶ್ ಮೇಲೆ ಹಲ್ಲೆ!
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ ಉದ್ರಿಕ್ತರ ಗುಂಪು ಹಲ್ಲೆ ಮಾಡಿದೆ...

Published On :
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ ಉದ್ರಿಕ್ತರ ಗುಂಪು ಹಲ್ಲೆ ಮಾಡಿದೆ.
ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗ್ ನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ದರ್ಶನಕ್ಕೆ ಅಣಿ ಮಾಡಲಾಗಿತ್ತು. ಈ ವೇಳೆ ಸ್ವಾಮಿ ಅಗ್ನಿವೇಶ್ ಅವರು ಅಂತಿಮ ದರ್ಶನ ಪಡೆಯಲು ಬಂದಿದ್ದರು. ಈ ವೇಳೆ ಉದ್ರಿಕ್ತರ ಗುಂಪು ಹಲ್ಲೆ ಮಾಡಿದೆ.
ಅಂತಿಮ ದರ್ಶನ ಪಡೆಯಲು ತೀವ್ರ ವಿರೋಧ ಹಾಗೂ ಹಲ್ಲೆ ಮಾಡಿದ್ದರಿಂದ ಅಗ್ನಿವೇಶ್ ಅವರು ಅಟಲ್ ಜೀ ಅವರ ಅಂತಿಮ ದರ್ಶನ ಪಡೆಯದೇ ವಾಪಸ್ಸಾಗಿದ್ದಾರೆ.
ಕಳೆದ ತಿಂಗಳು ಜಾರ್ಖಂಡ್ ನ ಪಕೂರ್ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ನಿರ್ಗಮಿಸುವಾಗ ಸ್ವಾಮಿ ಅಗ್ನಿವೇಶ್ ಮೇಲೆ ಭಾರತೀಯ ಜನತಾ ಯುವ ಮೋರ್ಚಾ(ಬಿಜೆವೈಎಂ)ಕಾರ್ಯಕರ್ತರು ಹಲ್ಲೆ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew Delhiಹಲ್ಲೆಸಾಮಾಜಿಕ ಕಾರ್ಯಕರ್ತSwami Agniveshಸ್ವಾಮಿ ಅಗ್ನಿವೇಶ್assaultsocial activistAB Vajpayeeಎಬಿ ವಾಜಪೇಯಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


