ಮಾಜಿ ಪ್ರಧಾನಿ ದಿವಂಗತ ವಾಜಪೇಯಿ ವಿರುದ್ಧ ಟೀಕೆ: ಗಾಂಧಿ ವಿವಿ ಪ್ರೊಫೆಸರ್ ಮೇಲೆ ಹಲ್ಲೆ
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಟೀಕೆ ಮಾಡಿದ್ದ ಬಿಹಾರ ಗಾಂಧಿ ವಿವಿ ಪ್ರೊಫೆಸರ್ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

Published On :
ಬಿಹಾರ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಟೀಕೆ ಮಾಡಿದ್ದ ಬಿಹಾರ ಗಾಂಧಿ ವಿವಿ ಪ್ರೊಫೆಸರ್ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಪ್ರೊಫೆಸರ್ ವಾಸವಿದ್ದ ಮೂರನೇ ಮಹಡಿಯಿಂದ ಆತನನ್ನು ಎಳೆದು ತಂದು ಹಲ್ಲೆ ಮಾಡಲಾಗಿದೆ, ಜೊತೆಗೆ ಆತನನ್ನು ಸಜೀವ ದಹಲ ಮಾಡಲು ಹಲ್ಲೆಕೋರರು ಯತ್ನಿಸಿದ್ದರು ಎಂದು ತಿಳಿದು ಬಂದಿದೆ.
ಕೂಡಲೇ ಪ್ರೊಫೆಸರ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು, ನಂತರ ಪಾಟ್ನಾದ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.
ನಾನು ವಾಜಪೇಯಿ ಅವರ ಬಗ್ಗೆ ಮಾತನಾಡಿರರಲಿಲ್ಲ, ವಿವಿ ಉಪಕುಲಪತಿಗಳ ಬಗ್ಗೆ ಕಮೆಂಟ್ ಹಾಕಿದ್ದಕ್ಕೆ ನನ್ನು ಮೇಲೆ ಹಲ್ಲೆ ಮಾಡಿದ್ದಾರೆ, ಅವರೆಲ್ಲಾ ಉಪ ಕುಲಪತಿಗಳ ಕಡೆಯವರು ಎಂದು ಗಾಯಗೊಂಡಿರುವ ಪ್ರೊಪೆಸರ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


