ದೇಶ

ಕೇರಳ ಪ್ರವಾಹವನ್ನು ರಾಷ್ಟ್ರೀಯ ವಿಪತ್ತಾಗಿ ಘೋಷಿಸಿ: ಪ್ರಧಾನಿಗೆ ರಾಹುಲ್ ಗಾಂಧಿ ಮನವಿ

ಕೇರಳ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಕೇರಳ ಪ್ರವಾಹವನ್ನು ರಾಷ್ಟ್ರೀಯ ವಿಪತ್ತಾಗಿ  ಘೋಷಿಸಿ: ಪ್ರಧಾನಿಗೆ ರಾಹುಲ್ ಗಾಂಧಿ ಮನವಿ
ಕೇರಳ ಪ್ರವಾಹ
Published On :
ನವದೆಹಲಿ: ಕೇರಳ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಆಗಸ್ಟ್ 8 ರಿಂದ ಉಂಟಾಗಿರುವ ಪ್ರವಾಹದಿಂದಾಗಿ  324 ಜನರು ಸಾವನ್ನಪ್ಪಿದ್ದು, ಸುಮಾರು 3.14 ಲಕ್ಷ ಜನರು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.ಮಿಲಿಯನ್ ಜನರ  ಮುಂದಿನ ಬದುಕಿಗಾಗಿ  ಕೇರಳ  ಪ್ರವಾಹವನ್ನು ವಿಳಂಬ ನೀತಿ ಅನುಸರಿಸದೆ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ರಾಹುಲ್ ಗಾಂಧಿ ಟ್ವಿಟರ್ ಮೂಲಕ ಪ್ರಧಾನಿಗೆ ಮನವಿ ಮಾಡಿಕೊಂಡಿದ್ದಾರೆ.
ಅಗತ್ಯವಿರುವವರಿಗೆ ಸಹಾಯ ಮಾಡಲು ನಮ್ಮ ಎಲ್ಲಾ ಸಂಪನ್ಮೂಲಗಳನ್ನು ಮತ್ತು ಜನರನ್ನು ಕೇಂದ್ರೀಕರಿಸಿ ಎಂದು ರಾಹುಲ್ ಗಾಂಧಿ ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.