ಕೇರಳ ಪ್ರವಾಹ: ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ ರದ್ದು
ಕಳೆದೊಂದು ವಾರದಲ್ಲಿ 170ಕ್ಕೂ ಹೆಚ್ಚು ಜನರನ್ನು ಬಲಿಪಡೆದು, ಲಕ್ಷಾಂತರ ಜನರನ್ನು ನಿರಾಶ್ರಿತರನ್ನಾಗಿ ಮಾಡಿರುವ ಕೇರಳದ ಮುಂಗಾರು ಮಳೆಯ ಪ್ರಕೋಪವನ್ನು ಪರಿಶೀಲನೆ ನಡೆಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

Published On :
ತಿರುವನಂತಪುರ: ಕಳೆದೊಂದು ವಾರದಲ್ಲಿ 170ಕ್ಕೂ ಹೆಚ್ಚು ಜನರನ್ನು ಬಲಿಪಡೆದು, ಲಕ್ಷಾಂತರ ಜನರನ್ನು ನಿರಾಶ್ರಿತರನ್ನಾಗಿ ಮಾಡಿರುವ ಕೇರಳದ ಮುಂಗಾರು ಮಳೆಯ ಪ್ರಕೋಪವನ್ನು ಪರಿಶೀಲನೆ ನಡೆಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೆರಳಿದ್ದು, ಈ ನಡುವೆ ಪ್ರತಿಕೂಲ ಹವಾಮಾನದಿಂದಾಗಿ ಮೋದಿಯವರ ವೈಮಾನಿಕ ಸಮೀಕ್ಷೆಯನ್ನು ರದ್ದು ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ.
ಕಳೆದೊಂದು ಶತಮಾನದಲ್ಲಿಯೇ ಭೀಕರ ಜಲಪ್ರಳಯಕ್ಕೆ ತುತ್ತಾಗಿರುವ ಕೇರಳದಲ್ಲಿ ಮಳೆರಾಯ ಇನ್ನು ಮುಂದುವರೆದಿದ್ದು, ಮಂಜು ಕವಿದ ವಾತಾವರಣ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಮೋದಿಯವರ ವೈಮಾನಿಕ ಸಮೀಕ್ಷೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 106 ಮಂದಿ ಪ್ರಾಣ ತೆತ್ತಿದ್ದಾರೆ. ಇದರಿಂದಾಗಿ ಕೇವಲ ಆ.8ರಿಂದ ಈ ವರೆಗೆ ಅಂದರೆ ಕೇವಲ 10 ದಿನಗಳಲ್ಲಿ ಕೇರಳದ ಮಾರಣಾಂತಿಕ ಮಳೆ, ಪ್ರವಾಹ ಹಾಗೂ ಭೂ ಕುಸಿತಕ್ಕೆ ಬಲಿಯಾದವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ. ಮಳೆಗಾಲ ಆರಂಭವಾದಾಗಿನಿಂದ ಈವರೆಗೂ 324 ಮಂದಿ ಜೀವಹರಣವಾಗಿದೆ.
ಕೇರಳದ 14 ಜಿಲ್ಲೆಗಳ ಪೈಕಿ 11 ಜಿಲ್ಲೆಗಳಲ್ಲಿ ಅತ್ಯಧಿಕ ಅಪಾಯದ ಸಂಕೇತವಾದ ರೆಡ್ ಅಲರ್ಟ್ ಸಾರಲಾಗಿತ್ತು. ಇದೀಗ ಪಠಾಣಂತಿಟ್ಟ, ಅಲಪ್ಪುಳ್ಳ, ಎರ್ನಾಕುಲಂ ಹಾಗೂ ತ್ರಿಶ್ಯೂರಿನಂತರ ನಾಲ್ಕು ಜಿಲ್ಲೆಗಳಲ್ಲಿ ಅಪಾಯದ ಸ್ಥಿತಿ ಇದ್ದು, ಈ ಜಿಲ್ಲೆಗಳ ಸರಾರಿ 20 ಸೆಂ.ಮೀ ಮಳೆ ಸುರಿಯುತ್ತಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಜನಜೀವನ ಹೈರಾಣಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


