ಮಣಿಶಂಕರ್ ಅಯ್ಯರ್ ಅಮಾನತು ಆದೇಶ ಹಿಂಪಡೆದ ಕಾಂಗ್ರೆಸ್
ಮಣಿಶಂಕರ್ ಅಯ್ಯರ್ ಅವರನ್ನು ಅಮಾನತುಗೊಳಿಸಿ ಪಕ್ಷದ ಶಿಸ್ತು ಸಮಿತಿ ಹೊರಡಿಸಿದ್ದ ಆದೇಶವನ್ನು ಕಾಂಗ್ರೆಸ್ ಪಕ್ಷ ಹಿಂಪಡೆದಿದೆ.

Published On :
ನವದೆಹಲಿ: ಮಣಿಶಂಕರ್ ಅಯ್ಯರ್ ಅವರನ್ನು ಅಮಾನತುಗೊಳಿಸಿ ಪಕ್ಷದ ಶಿಸ್ತು ಸಮಿತಿ ಹೊರಡಿಸಿದ್ದ ಆದೇಶವನ್ನು ಕಾಂಗ್ರೆಸ್ ಪಕ್ಷ ಹಿಂಪಡೆದಿದೆ.
2017 ರ ಡಿಸೆಂಬರ್ ತಿಂಗಳಲ್ಲಿ ನಡೆದ ಗುಜರಾತ್ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ, ಅಸಾಂವಿಧಾನಿಕ ಶಬ್ದ ಪ್ರಯೋಗಿಸಿದ್ದ ಕಾರಣ ಕಾಂಗ್ರೆಸ್ ನಿಂದ ಮಣಿಶಂಕರ್ ಅಯ್ಯರ್ ಅವರನ್ನು ಅಮಾನತುಗೊಳಿಸಲಾಗಿತ್ತು. ಶಿಸ್ತು ಕ್ರಮ ಕೈಗೊಂಡ ನಂತರ ಮಣಿಶಂಕರ್ ಅಯ್ಯರ್ ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು. ಶಿಸ್ತು ಸಮಿತಿ ಆದೇಶವನ್ನು ಹಿಂಪಡೆಯುವ ನಿರ್ಧಾರಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅನುಮೋದನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


