ಇಡೀ ದೇಶ ನಿಮ್ಮೊಂದಿಗಿದೆ: ಪ್ರವಾಹ ಪೀಡಿತ ಕೇರಳ ರಾಜ್ಯಕ್ಕೆ ರಾಷ್ಟ್ರಪತಿ ಕೋವಿಂದ್
ಭಾರಿ ಮಳೆ ಹಾಗೂ ಪ್ರವಾಹಕ್ಕೆ ನಲುಗಿ ಹೋಗಿರುವ ಕೇರಳ ರಾಜ್ಯದ ಜನತೆಗೆ ಭರವಸೆ ನೀಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಇಡೀ ದೇಶವೇ ನಿಮ್ಮೊಂದಿಗಿದೆ ಎಂದು ಭಾನುವಾರ ಹೇಳಿದ್ದಾರೆ...

Published On :
ನವದೆಹಲಿ: ಭಾರಿ ಮಳೆ ಹಾಗೂ ಪ್ರವಾಹಕ್ಕೆ ನಲುಗಿ ಹೋಗಿರುವ ಕೇರಳ ರಾಜ್ಯದ ಜನತೆಗೆ ಭರವಸೆ ನೀಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಇಡೀ ದೇಶವೇ ನಿಮ್ಮೊಂದಿಗಿದೆ ಎಂದು ಭಾನುವಾರ ಹೇಳಿದ್ದಾರೆ.
ಕೇರಳ ಪ್ರವಾಹ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೇರಳ ರಾಜ್ಯ ಪ್ರವಾಹ ಪರಿಸ್ಥಿತಿ ಕುರಿತಂತೆ ಆ ರಾಜ್ಯದ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮಾತುಕತೆ ನಡೆಸಿದ್ದೇನೆ. ಶೀಘ್ರದಲ್ಲಿಯೇ ಕೇರಳ ರಾಜ್ಯ ಜನತೆಯ ಸಮೃದ್ಧತೆ ಹಾಗೂ ಸ್ಥಿತಿಸ್ಥಾಪಕತ್ವ ಒಟ್ಟಿಗೆ ಬರಲಿದೆ. ಇಡೀ ದೇಶವೇ ನಿಮ್ಮೊಂದಿಗೆ ಎಂದು ಹೇಳಿದ್ದಾರೆ.
ಇದಲ್ಲದೆ, ಕೇರಳ ರಾಜ್ಯ ಪ್ರವಾಹ ಪರಿಸ್ಥಿತಿ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಕಾರ್ಯ ನಿರ್ವಹಿಸುತ್ತಿರುವುದು ತೃಪ್ತಿ ತಂದಿದೆ ಎಂದು ತಿಳಿಸಿದ್ದಾರೆ.
ಪ್ರವಾಹ ಪರಿಸ್ಥಿತಿ ಎದುರಿಸುವಲ್ಲಿ ಹಾಗೂ ನೆರವು ಕಾರ್ಯಾಚರಣೆಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿರುವುದು ತೃಪ್ತಿ ತಂದಿದೆ. ಎನ್'ಡಿಆರ್'ಎಪ್ ಮತ್ತು ರಾಜ್ಯ ಹಾಗೂ ಕೇಂದ್ರ ಮಟ್ಟದ ಸಾರ್ವಜನಿಕ ಅಧಿಕಾರಿಗಳಿರುವ ಪರಿಹಾರ ಸಂಸ್ಥೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಇದೇ ವೇಳೆ ಕೊಂಡಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


