ರಾಫೆಲ್ ಡೀಲ್ ಬಗ್ಗೆ ರಾಹುಲ್ ಗೆ ಅನಿಲ್ ಅಂಬಾನಿ ಪತ್ರ
ರಾಫೆಲ್ ಡೀಲ್ ನಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರಿಲಾಯನ್ಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಅನಿಲ್ ಅಂಬಾನಿ ಪತ್ರ ಬರೆದಿದ್ದಾರೆ.

Published On :
ಮುಂಬೈ: ರಾಫೆಲ್ ಡೀಲ್ ನಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರಿಲಾಯನ್ಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಅನಿಲ್ ಅಂಬಾನಿ ಪತ್ರ ಬರೆದಿದ್ದಾರೆ.
"ಪಟ್ಟಭದ್ರ ಹಿತಾಸಕ್ತಿಗಳು, ಕಾರ್ಪೊರೇಟ್ ವಿರೋಧಿಗಳು ರಾಫೆಲ್ ಜೆಟ್ ಖರೀದಿ ಹಗರಣದ ಬಗ್ಗೆ ಕಾಂಗ್ರೆಸ್ ಪಕ್ಷವನ್ನು ದಾರಿ ತಪ್ಪಿಸಿದ್ದಾರೆ ಎಂದು ಹೇಳಿದ್ದಾರೆ. ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಮುಂದುವರೆದ ವೈಯಕ್ತಿಕ ವಾಗ್ದಾಳಿಗಳಿಂದ ನೋವಾಗಿದೆ ಎಂದೂ ರಾಹುಲ್ ಗಾಂಧಿಗೆ ಬರೆದಿರುವ ಪತ್ರದಲ್ಲಿ ಅಂಬಾನಿ ಹೇಳಿದ್ದಾರೆ.
ತಪ್ಪು ಮಾಹಿತಿ ಪಡೆದು ರಾಹುಲ್ ಗಾಂಧಿ ವೈಯಕ್ತಿಕ ವಾಗ್ದಾಳಿ ನಡೆಸಿರುವುದು ದುರದೃಷ್ಟಕರ, ಇದರಿಂದಾಗಿ ನೋವಾಗಿದೆ ಎಂದು ಅನಿಲ್ ಅಂಬಾನಿ ಪತ್ರದಲ್ಲಿ ಬರೆದಿರುವುದಾಗಿ ರಿಲಾಯನ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಹೇಳಿದೆ.
ರಫ್ತು ಹಾಗೂ ಕೆಲಸದ ಹಂಚಿಕೆಯಲ್ಲಿ ರಿಲಾಯನ್ಸ್ ಸಂಸ್ಥೆಯ ಪಾತ್ರದ ಬಗ್ಗೆ ಸ್ಪಷ್ಟನೆ ನೀಡಿರುವ ಅಂಬಾನಿ, ರಾಫೆಲ್ ಫೈಟರ್ ಜೆಟ್ ಗಳನ್ನು ರಿಲಾಯನ್ಸ್ ಅಥವಾ ಡಸ್ಸಾಲ್ಟ್ ರಿಲಯನ್ಸ್ ಜಾಯಿಂಟ್ ವೆಂಚರ್ ನಲ್ಲಿ ಉತ್ಪಾದನೆ ಮಾಡಲಾಗುತ್ತಿಲ್ಲ ಎಂದು ಹೇಳಿದ್ದಾರೆ.
ಫ್ರೆಂಚ್ ನ 36 ರಾಫೆಲ್ ಜೆಟ್ ಗಳನ್ನು ಖರೀದಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡುವುದಕ್ಕೂ ಕೇವಲ 10 ದಿನಗಳ ಮುಂಚೆ ರಿಲಾಯನ್ಸ್ ಡಿಫೆನ್ಸ್ ಸಂಸ್ಥೆ ಅಸ್ಥಿತ್ವಕ್ಕೆ ಬಂದಿತ್ತು ಎಂಬ ರಾಹುಲ್ ಗಾಂಧಿ ಅವರ ಆರೋಪಕ್ಕೂ ಸ್ಪಷ್ಟನೆ ನೀಡಿರುವ ಅನಿಲ್ ಅಂಬಾನಿ, ರಾಹುಲ್ ಗಾಂಧಿ ಆರೋಪ ಸಂಪೂರ್ಣ ಸುಳ್ಳಾಗಿದ್ದು, ರಕ್ಷಣಾ ಉತ್ಪಾದನೆ ಕ್ಷೇತ್ರಕ್ಕೆ ರಿಲಾಯನ್ಸ್ ಸಂಸ್ಥೆ ತೆರೆದುಕೊಳ್ಳುವುದರ ಬಗ್ಗೆ 2014 ರ ಡಿಸೆಂಬರ್ ಹಾಗೂ 2015 ರ ಜನವರಿ ತಿಂಗಳಲ್ಲೇ ಘೋಷಣೆ ಮಾಡಿತ್ತು, 2015 ರ ಫೆಬ್ರವರಿ ತಿಂಗಳಾಲ್ಲಿ ಭಾರತೀಯ ಸ್ಟಾಕ್ ಎಕ್ಸ್ ಚೇಂಜ್ ಗೂ ಈ ಬಗ್ಗೆ ಮಾಹಿತಿ ನೀಡಲಾಗಿತ್ತು ಎಂದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


