ದಾಭೋಲ್ಕರ್ ಹತ್ಯೆ ಪ್ರಕರಣ: ಬಂಧಿತ ಆರೋಪಿ ಶ್ರೀಕಾಂತ್ 8 ದಿನಗಳ ಕಾಲ ಎಟಿಎಸ್ ವಶಕ್ಕೆ
4 ವರ್ಷಗದಳ ಹಿಂದೆ ಹತ್ಯೆಯಾಗಿದ್ದ ಮಹಾರಾಷ್ಟ್ರದ ಮೂಢನಂಬಿಕೆಗಳ ವಿರೋಧಿ ಹೋರಾಟಗಾರ ನರೇಂದ್ರ ದಾಬೋಲ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರವಷ್ಟೇ ಬಂಧನಕ್ಕೊಳಗಾಗಿದ್ದ ಆಱೋಪಿ ಶ್ರೀಕಾಂತ್ ಪಂಗರ್ಕರ್'ನ್ನು...

Published On :
ನವದೆಹಲಿ: 4 ವರ್ಷಗದಳ ಹಿಂದೆ ಹತ್ಯೆಯಾಗಿದ್ದ ಮಹಾರಾಷ್ಟ್ರದ ಮೂಢನಂಬಿಕೆಗಳ ವಿರೋಧಿ ಹೋರಾಟಗಾರ ನರೇಂದ್ರ ದಾಬೋಲ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರವಷ್ಟೇ ಬಂಧನಕ್ಕೊಳಗಾಗಿದ್ದ ಆಱೋಪಿ ಶ್ರೀಕಾಂತ್ ಪಂಗರ್ಕರ್'ನ್ನು 8 ದಿನಗಳ ಕಾಲ ಉಗ್ರ ನಿಗ್ರಹ ದಳದ ವಶಕ್ಕೆ ನೀಡಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಪಗಾಗಿರುವ ಆರೋಪಿಗಳ ಕುರಿತಂತೆ ಮಾಹಿತಿಗಳನ್ನು ಸಂಗ್ರಹಿಸಿದ್ದ ವಿಶೇಷ ತನಿಖಾ ದಳ (ಎಸ್ಐಟಿ)ದ ಅಧಿಕಾರಿಗಳು, ಆ ಮಾಹಿತಿಗಳನ್ನು ಸಂಬಂಧಿಸಿದ ಇತರೆ ಸಂಸ್ಥೆಗಳೊಂದಿಗೆ ಹಂಚಿಕೊಂಡಿತ್ತು. ಈ ವೇಳೆ ಪ್ರಕಾಶ್ ರಾವ್ ಅಂದುರೆ ಎಂಬಾತನ ಹೆಸರು ಕೇಳಿಬಂದಿತ್ತು.
ಎಸ್ಐಟಿ ನೀಡಿದ ಮಾಹಿತಿ ಮೇರೆಗೆ ಶನಿವಾರ ಸಂಜೆಯೇ ಅಧಿಕಾರಿಗಳು ಔರಂಗಾಬಾದ್'ನ ಸಚಿನ ಪ್ರಕಾಶ್ ರಾವ್ ಅಂದುರೆಯನ್ನು ಬಂಧನಕ್ಕೊಳಪಡಿಸಿದ್ದರು.
ಈತನನ್ನು ವಿಚಾರಣೆಗೊಳಪಡಿಸಿದಾಗ ಕೆಲ ಮಾಹಿತಿಗಳನ್ನು ಬಾಯ್ಬಿಟ್ಟಿದ್ದ. ಈತ ನೀಡಿದ್ದ ಮಾಹಿತಿಯನ್ನು ಆಧರಿಸಿ ಶ್ರೀಕಾಂತ್ ಪಂಗರ್ಕರ್ ಎಂಬಾತನನ್ನು ಸಿಬಿಐ ಅಧಿಕಾರಿ ಶನಿವಾರ ಸಂಜೆಯೇ ವಶಕ್ಕೆ ಪಡೆದುಕೊಂಡಿದ್ದರು.
ಇದರತೆ ಆರೋಪಿಯನ್ನು ಇಂದು ಮುಂಬೈ ಸೆಷನ್ಸ್ ನ್ಯಾಯಾಲಯಕ್ಕೆ ಅಧಿಕಾರಿಗಳು ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿರುವ ನ್ಯಾಯಾಲಯ ಆರೋಪಿಯನ್ನು ಆಗಸ್ಟ್ 28ರವರೆಗೂ ಉಗ್ರ ನಿಗ್ರಹ ದಳದ (ಎಟಿಎಸ್) ವಶಕ್ಕೆ ನೀಡಿದೆ.
ಬೆಳಗ್ಗೆ ವಾಯುವಿಹಾರಕ್ಕೆಂದು ತೆರಳಿದ್ದ ಸಂದರ್ಭ 2013ರ ಆ.20ರಂದು ದಾಭೋಲ್ಕರ್ ಅವರನ್ನು ಪುಣೆಯ ಓಂಕಾರೇಶ್ವರ ಸೇತುವೆ ಬಳಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.
ಆರಂಭದಲ್ಲಿ ಪುಣೆ ಪೊಲೀಸರು ತನಿಖೆ ನಡೆಸಿದ್ದರು. ಹಂತಕರ ಸುಳಿವು ಲಭ್ಯವಾಗದ ಹಿನ್ನಲೆಯಲ್ಲಿ ಪ್ರಕರಣ ಸಿಬಿಐಗೆ ಹಸ್ತಾಂತರವಾಗಿತ್ತು. ಬೆಂಗಳೂರಿನ ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣದ ವಿಚಾರಣೆ ವೇಳೆ ಸಿಕ್ಕ ಮಾಹಿತಿ ಆಧರಿಸಿ ಮಹಾರಾಷ್ಟ್ರದಲ್ಲಿ ದಾಳಿ ನಡೆಸಿದಾಗ ಶಸ್ತ್ರಾಸ್ತ್ರ ಹೊಂದಿದ್ದ ಮೂವಲ ಬಂಧನವಾಗಿತ್ತು. ಬಂಧಿತರು ಅಂದುರೆ ಹೆಸರು ಹೇಳಿದ್ದರು ಎಂದು ಹೇಳಲಾಗುತ್ತಿತ್ತು. ಈ ನಡುವೆ ಅಂದುರೆಯನ್ನು ಆ.26ರವರೆಗೆ ಸಿಬಿಐ ವಶಕ್ಕೆ ಒಪ್ಪಿಸಿ ಪುಣೆಯ ಪ್ರಥಮ ದರ್ಜೆ ಜ್ಯುಡಿಷಿಯನ್ ಮ್ಯಾಜಿಸ್ಟ್ರೇಟ್ ಎ.ಎಸ್.ಮಜುಂದಾರ್ ಅವರು ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಹತ್ಯೆmurderಗೌರಿ ಲಂಕೇಶ್ATSNarendra Dabholkarನರೇಂದ್ರ ದಾಬೋಲ್ಕರ್ಎಟಿಎಸ್Gauri LankeshShrikant Pangarkarಶ್ರೀಕಾಂತ್ ಪಂಗಾರ್ಕರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


