ಕೇರಳ ಪ್ರವಾಹ: ಕೊಚ್ಚಿ ನೌಕಾ ನೆಲೆಯಿಂದ ವಿಮಾನ ಸಂಚಾರ ಆರಂಭ
ಶತಮಾನದ ಭೀಕರ ಪ್ರವಾಹದಿಂದ ತತ್ತರಿಸಿ ಹೋಗಿರುವ ಕೇರಳದಲ್ಲಿ ಮತ್ತೆ ವಿಮಾನ ಸಂಚಾರ ಆರಂಭವಾಗಿದೆ.

Published On :
ಕೊಚ್ಚಿ: ಶತಮಾನದ ಭೀಕರ ಪ್ರವಾಹದಿಂದ ತತ್ತರಿಸಿ ಹೋಗಿರುವ ಕೇರಳದಲ್ಲಿ ಮತ್ತೆ ವಿಮಾನ ಸಂಚಾರ ಆರಂಭವಾಗಿದೆ.
ಭೀಕರ ನೆರೆಯಿಂದಾಗಿ ಸ್ಥಗಿತಗೊಂಡಿದ್ದ ಕೊಚ್ಚಿ ಅಂತಾರಾಷ್ಟ್ರ ವಿಮಾನ ನಿಲ್ದಾಣ ಸೇವೆಗಳು ಮತ್ತೆ ಪುನಾರಂಭಗೊಂಡಿದೆ. ಆದರೆ ವಿಮಾನಗಳು ಸಂಚರಿಸುತ್ತಿರುವುದ ಕೊಚ್ಚಿ ವಿಮಾನ ನಿಲ್ದಾಣದಿಂದಲ್ಲ. ಬದಲಿಗೆ ಕೊಚ್ಚಿ ನೌಕಾ ನೆಲೆಯಿಂದ. ಯುದ್ಧ ವಿಮಾನ ವಾಹಕ ನೌಕೆ ಐಎಎನ್ ಎಸ್ ಗರುಡಾ ನೌಕಾ ನೆಲೆಯಲ್ಲಿ ಇದೇ ಮೊದಲ ಬಾರಿಗೆ ವಾಣಿಜ್ಯ ವಿಮಾನಗಳ ಹಾರಾಟಕ್ಕೆ ಅನುವು ಮಾಡಿಕೊಡಲಾಗಿದೆ.
ಇಂದು ಬೆಳಿಗ್ಗೆ ಐಎನ್ಎಸ್ ಗರುಡಾ ನೌಕಾ ನೆಲೆಯಲ್ಲಿ ಮೊದಲ ವಿಮಾನ ಇಂದು ಲ್ಯಾಂಡ್ ಆಗಿದೆ. ಆದರೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಸ್ಟ್ 26 ರ ವರೆಗೆ ಕಾರ್ಯ ನಿರ್ವಹಿಸುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಆದರೆ ಕೇರಳಕ್ಕೆ ತುರ್ತಾಗಿ ವಿಮಾನಗಳ ಹಾರಾಟದ ಅಗತ್ಯತೆ ಇದ್ದು, ಇದೇ ಕಾರಣಕ್ಕೆ ಐಎನ್ ಎಲ್ ಗರುಡಾ ನೌಕಾ ನೆಲೆ ಮೂಲಕ ವಿಮಾನಯಾನ ಹಾರಾಕ್ಕೆ ನೆರವಾಗಿದೆ.
ಇನ್ನು ಕಳೆದ ಹತ್ತು ದಿನಗಳಿಂದ ಎಡೆಬಿಡದೇ ಕಾಡಿದ್ದ ಮಳೆ ಮತ್ತು ಪ್ರವಾಹದಿಂದಾಗಿ ಸುಮಾರು 200ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, 38 ಸಾವಿರಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ. ಅಂತೆಯೇ ಒಟ್ಟು 3,734 ನಿರಾಶ್ರಿತ ಶಿಬಿರಗಳಲ್ಲಿ 8,46,680 ಮಂದಿ ಆಶ್ರಯ ಪಡೆದಿದ್ದಾರೆ.
ಪ್ರಸ್ತುತ ಕೇರಳದಲ್ಲಿ ಮಳೆಯ ಅಬ್ಬರ ಕಡಿತವಾಗಿದ್ದು, 12 ಜಿಲ್ಲೆಗಳಲ್ಲಿ ಘೋಷಣೆ ಮಾಡಲಾಗಿದ್ದ ಕೆಂಪು ಅಲರ್ಟ್ ಅನ್ನು ಹಿಂದಕ್ಕೆ ಪಡೆಯಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ರಾಜಧಾನಿ ತಿರುವನಂತಪುರಂ, ಕೊಲ್ಲಂ ಮತ್ತು ಕಾಸರಗೋಡಿನಲ್ಲಿ ಆರೆಂಜ್ ಅಲರ್ಟ್ ಮುಂದುವರೆಸಲಾಗಿದೆ.
ಅಂತೆಯೇ ಮಳೆ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ ಸಣ್ಣ ಪ್ರಮಾಣ ಮಳೆಯಾಗುವ ಕುರಿತು ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದೀಚೆಗೆ ಮಳೆ ಅಬ್ಬರ ಗಣನೀಯವಾಗಿ ತಗ್ಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


