ಇಂಗ್ಲೆಂಡ್ ನಲ್ಲಿರುವ ನೀರವ್ ಮೋದಿ ಹಸ್ತಾಂತರಕ್ಕೆ ಸಿಬಿಐ ಮನವಿ
ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರ ಉದ್ಯಮಿ ನೀರವ್ ಮೋದಿ ಇಂಗ್ಲೆಂಡ್ ನಲ್ಲಿರುವುದು ದೃಢಪಟ್ಟಿದ್ದು, ಆತನ ಹಸ್ತಾಂತರಿಸುವಂತೆ ಸಿಬಿಐ ಮನವಿ ಸಲ್ಲಿಸಿದೆ.

Published On :
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರ ಉದ್ಯಮಿ ನೀರವ್ ಮೋದಿ ಇಂಗ್ಲೆಂಡ್ ನಲ್ಲಿರುವುದು ದೃಢಪಟ್ಟಿದ್ದು, ಆತನ ಹಸ್ತಾಂತರಿಸುವಂತೆ ಸಿಬಿಐ ಮನವಿ ಸಲ್ಲಿಸಿದೆ.
ಮೋದಿ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಗೃಹ ಸಚಿವಾಲಯದ ಮನವಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ವೀಕರಿಸಿದ್ದು, ಈ ಮನವಿಯನ್ನು ಲಂಡನ್ ಸರ್ಕಾರಕ್ಕೆ ರವಾನಿಸುವಂತೆ ಲಂಡನ್ ನಲ್ಲಿರುವ ಭಾರತೀಯ ಹೈಕಮೀಷನ್ ಗೆ ಕಳುಹಿಸಲಾಗಿದೆ ಎಂದು ರಾಜ್ಯಸಭೆಗೆ ಹೇಳಿದ್ದರು.
2002 ರಿಂದಲೂ ಇಂಗ್ಲೆಂಡ್ ಹೋಗಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಪೈಕಿ ಮೋದಿ 29 ನೇ ಯವರಾಗಿದ್ದಾರೆ. ಮದ್ಯ ಉದ್ಯಮಿ ವಿಜಯ್ ಮಲ್ಯ ಹಸ್ತಾಂತರ ಪ್ರಕರಣ ವಿಚಾರಣೆ ಹಂತದಲ್ಲಿದ್ದು, ಕಳೆದ 16 ವರ್ಷಗಳಿಂದಲೂ 9 ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳ ಹಸ್ತಾಂತರಕ್ಕೆ ಇಂಗ್ಲೆಂಡ್ ನಿರಾಕರಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


