ದೇಶ

ಕೇರಳ ಪ್ರವಾಹ: ಪರಿಹಾರ ಕಾರ್ಯಾಚರಣೆಗೆ ಭಾರತ ವಿದೇಶಿ ದೇಣಿಗೆ ಸ್ವೀಕರಿಸುವುದು ಅನುಮಾನ?!

ಸರ್ಕಾರ ಯಾವುದೇ ವಿದೇಶಿ ಆರ್ಥಿಕ ನೆರವನ್ನು ಸ್ವೀಕರಿಸದೇ ಇರಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಕೇರಳ ಪ್ರವಾಹ: ಪರಿಹಾರ ಕಾರ್ಯಾಚರಣೆಗೆ ಭಾರತ ವಿದೇಶಿ ದೇಣಿಗೆ ಸ್ವೀಕರಿಸುವುದು ಅನುಮಾನ?!
ಕೇರಳ ಪ್ರವಾಹ: ಪರಿಹಾರ ಕಾರ್ಯಾಚರಣೆಗೆ ಭಾರತ ವಿದೇಶಿ ದೇಣಿಗೆಯನ್ನು ಸ್ವೀಕರಿಸುವುದು ಅನುಮಾನ?!
Published On :
ನವದೆಹಲಿ: ಕೇರಳ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು, ರಕ್ಷಣಾ ಕಾರ್ಯಾಚರಣೆ, ಪುನರ್ವಸತಿಗಾಗಿ ಯುಎಇ ಸುಮಾರು 700 ಕೋಟಿ ರೂಪಾಯಿಗಳಷ್ಟು ನೆರವು ನೀಡಲು ಮುಂದಾಗಿದೆ. ಆದರೆ ಸರ್ಕಾರ ಯಾವುದೇ ವಿದೇಶಿ ಆರ್ಥಿಕ ನೆರವನ್ನು ಸ್ವೀಕರಿಸದೇ ಇರಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. 
ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಈ ಬಗ್ಗೆ ಪಿಟಿಐ ನಲ್ಲಿ ವರದಿ ಪ್ರಕಟವಾಗಿದ್ದು, ಸಂಪೂರ್ಣವಾಗಿ ದೇಶದ ಆರ್ಥಿಕ ನೆರವಿನಲ್ಲೇ ಕೇರಳ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. 
ಯುಎಇಯ ನ ರಾಜ ಶೇಖ್ ಮೊಹಮ್ಮದ್ ಬಿನ್ ಝಯೀದ್ ಅಲ್ ನಹ್ಯಾನ್  ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿದ್ದು, ಸುಮಾರು 700 ಕೋಟಿ ರೂ ಆರ್ಥಿಕ ನೆರವು ನೀಡುವುದಾಗಿ ಹೇಳಿದ್ದನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದರು. 
ಅರಬ್ ನಲ್ಲಿ ಕೆಲಸ ಮಾಡುವ ಭಾರತೀಯರ ಸಂಖ್ಯೆ ಹೆಚ್ಚಿದ್ದು ಈ ಪೈಕಿ ಶೇ.80 ರಷ್ಟು ಜನರು ಕೇರಳದವರಾಗಿದ್ದಾರೆ. ಇನ್ನು ಯುಎಇ ಜೊತೆಗೆ ಮಾಲ್ಡೀವ್ಸ್ ಸರ್ಕಾರವೂ ಸುಮಾರು 35 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲು ಮುಂದಾಗಿದೆ. ಆದರೆ ಭಾರತ ಸರ್ಕಾರ ವಿದೇಶಿ ಆರ್ಥಿಕ ನೆರವನ್ನು ಸ್ವೀಕರಿಸುವುದು ಅನುಮಾನ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.