ಭಾರತ-ಚೀನಾ ಗಡಿ ಪ್ರದೇಶದಲ್ಲಿನ ಶಾಂತಿ ಪ್ರಬುದ್ಧತೆಯ ಸೂಚಕ: ಪ್ರಧಾನಿ ಮೋದಿ
ಡೋಕ್ಲಾಮ್ ವಿವಾದದ ನಂತರ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡಿರುವ ಚೀನಾದ ರಕ್ಷಣಾ ಸಚಿವ ವೈ ಫೆಂಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆ.21 ರಂದು ಭೇಟಿ ಮಾಡಿ ಮಹತ್ವದ ವಿಷಯಗಳ ಬಗ್ಗೆ

Published On :
ನವದೆಹಲಿ: ಡೋಕ್ಲಾಮ್ ವಿವಾದದ ನಂತರ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡಿರುವ ಚೀನಾದ ರಕ್ಷಣಾ ಸಚಿವ ವೈ ಫೆಂಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆ.21 ರಂದು ಭೇಟಿ ಮಾಡಿ ಮಹತ್ವದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಇದೇ ವೇಳೆ ಗಡಿ ವಿಷಯದ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಚೀನಾ ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಭಾರತ-ಚೀನಾ ಗಡಿ ಪ್ರದೇಶದಲ್ಲಿನ ಶಾಂತಿ ಪ್ರಬುದ್ಧತೆಯ ಸೂಚಕವಾಗಿದೆ ಎಂದು ಹೇಳಿದ್ದಾರೆ. ಭಾರತ-ಚೀನಾ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಬುದ್ಧತೆಯಿಂದ ನಿರ್ವಹಿಸುತ್ತಿದ್ದು, ವಿವಾದ ಆಗದಂತೆ ಎಚ್ಚರಿಕೆ ವಹಿಸುತ್ತಿದೆ ಎಂದಿರುವ ಪ್ರಧಾನಿ ಮೋದಿ ಭಾರತ- ಚೀನಾ ನಡುವಿನ ಉನ್ನತ ಮಟ್ಟದ ಸಂಪರ್ಕ ಉತ್ತಮಗೊಳ್ಳುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚೀನಾ-ಭಾರತದ ಸಂಬಂಧವನ್ನು ವಿಶ್ವದ ಸ್ಥಿರತೆಯ ಅಂಶವೆಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಹೇಳಿದ್ದು, ಕ್ಸೀ ಜಿನ್ ಪಿಂಗ್ ಅವರೊಂದಿಗೆ ಮಾತುಕತೆಯನ್ನು ನೆನಪಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


