ಸಿಧು ತಲೆಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ರಾಷ್ಟ್ರೀಯ ಬಜರಂಗ್ ದಳ
ಪ್ರವೀಣ್ ತೊಗಾಡಿಯಾ ಅವರ ರಾಷ್ಟ್ರೀಯ ಬಜರಂಗ ದಳ ಪಂಜಾಬ್ ನ ಸಚಿವ ನವಜೋತ್ ಸಿಂಗ್ ಸಿಧು ಅವರ ತಲೆಗೆ 5 ಲಕ್ಷ ರೂಪಾಯಿ ಘೋಷಣೆ ಮಾಡಿದೆ.

Published On :
ಲಖನೌ: ಪ್ರವೀಣ್ ತೊಗಾಡಿಯಾ ಅವರ ರಾಷ್ಟ್ರೀಯ ಬಜರಂಗ ದಳ ಪಂಜಾಬ್ ನ ಸಚಿವ ನವಜೋತ್ ಸಿಂಗ್ ಸಿಧು ಅವರ ತಲೆಗೆ 5 ಲಕ್ಷ ರೂಪಾಯಿ ಘೋಷಣೆ ಮಾಡಿದೆ.
ರಾಷ್ಟ್ರೀಯ ಬಜರಂಗ ದಳದ ಆಗ್ರಾ ಜಿಲ್ಲಾಧ್ಯಕ್ಷ ಸಂಜಯ್ ಜಾಟ್ ಈ ಘೋಷಣೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದು, ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನು ಆಲಿಂಗನ ಮಾಡಿದ ಸಿಧು ಶಿರಚ್ಛೇಧ ಮಾಡಿದವರಿಗೆ 5 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.
ಸಿಧು ಪಾಕ್ ಸೇನಾ ಮುಖ್ಯಸ್ಥರನ್ನು ಆಲಿಂಗನ ಮಾಡಿಕೊಂಡಿದ್ದಕ್ಕೆ ಸ್ವತಃ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದರು. ಸಿಧು ನಡೆ ಅಕ್ಷಮ್ಯವಾದದ್ದು, ಸಿಧು ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಬೇಕು, ಗುರುಗೋವಿಂದ್ ಸಿಂಗ್ ಅವರ ಬೋಧನೆಗಳನ್ನು ಸಿಧು ಮರೆತಿದ್ದಾರೆ. ನಮ್ಮ ಯೋಧರನ್ನು ಹತ್ಯೆ ಮಾಡುತ್ತಿರುವ ಪಾಕ್ ಸೇನೆಯ ಯೋಧರ ಮುಖ್ಯಸ್ಥರನ್ನು ಆಲಿಂಗನ ಹೇಗೆ ಸಾಧ್ಯ? ಎಂದು ಬಜರಂಗ ದಳ ಅಧ್ಯಕ್ಷ ಪ್ರಶ್ನಿಸಿದ್ದಾರೆ.
ಆಗ್ರಾಗೆ ಸಿಧು ಬಂದರೆ ಅವರಿಗೆ ಚಪ್ಪಲಿ ಹಾರ ಹಾಕುತ್ತಾರೆ ಎಂದು ಸಂಜಯ್ ಜಾಟ್ ಹೇಳಿದ್ದು, ಸಿಧು ಅವರ ಶಿರಚ್ಛೇಧ ಮಾಡಿದರೆ 5 ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


