ಕೇರಳ ಪ್ರವಾಹ: ಕೇಂದ್ರದಿಂದ 600 ಕೋಟಿ ಬಿಡುಗಡೆ, ಪರಿಹಾರ ಸಾಮಗ್ರಿಗಳ ಮೇಲಿನ ಜಿಎಸ್ ಟಿಗೆ ವಿನಾಯ್ತಿ
ಜಲಪ್ರವಾಹಕ್ಕೆ ತುತ್ತಾಗಿರುವ ಕೇರಳಕ್ಕೆ ಕೇಂದ್ರ ಸರ್ಕಾರ 600 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಸಂತ್ರಸ್ತರಿಗೆ ತಲುಪಿಸಲು ತರಿಸಲಾಗುವ ಪರಿಹಾರ ಸಾಮಗ್ರಿಗಳ ಮೇಲಿನ ಜಿಎಸ್ ಟಿಗೆ ವಿನಾಯ್ತಿ ನೀಡಿದೆ.

Published On :
ನವದೆಹಲಿ: ಜಲಪ್ರವಾಹಕ್ಕೆ ತುತ್ತಾಗಿರುವ ಕೇರಳಕ್ಕೆ ಕೇಂದ್ರ ಸರ್ಕಾರ 600 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಸಂತ್ರಸ್ತರಿಗೆ ತಲುಪಿಸಲು ತರಿಸಲಾಗುವ ಪರಿಹಾರ ಸಾಮಗ್ರಿಗಳ ಮೇಲಿನ ಜಿಎಸ್ ಟಿಗೆ ವಿನಾಯ್ತಿ ನೀಡಿದೆ.
ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿ (ಎನ್ ಸಿ ಎಂಸಿ) ಸತತ 6 ನೇ ದಿನ ಕೇರಳ ಪ್ರವಾಹಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ್ದು, ಈ ಸಭೆಯ ನಂತರ ಕೇಂದ್ರ ಸರ್ಕಾರ ಜಿಎಸ್ ಟಿ ಗೆ ವಿನಾಯ್ತಿ ನೀಡುವ ಘೋಷಣೆ ಮಾಡಿದೆ. ಕೇರಳದ ರಕ್ಷಣಾ ಕಾರ್ಯಾಚರಣೆ ಹಾಗೂ ಪರಿಸ್ಥಿತಿ ನಿರ್ವಹಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ 500 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 100 ಕೋಟಿಗಳನ್ನು ಘೋಷಿಸಿದ್ದಾರೆ. ಎರಡೂ ಪರಿಹಾರ ಮೊತ್ತಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಸಂತ್ರಸ್ತರಿಗೆ ಅಗತ್ಯವಿರುವ ವಸ್ತುಗಳನ್ನು ಹೊರಗಿನಿಂದ ತರಿಸಿಕೊಳ್ಳಬೇಕಿದ್ದು, ಇದಕ್ಕಾಗಿ ವಿಧಿಸಲಾಗುವ ಸೀಮಾ ಸುಂಕ ಹಾಗೂ ಐಜಿಎಸ್ ತಿ ಗಳಿಗೆ ವಿನಾಯ್ತಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇನ್ನು ಇದೇ ವೇಳೆ ಆಹಾರ ಪೂರೈಕೆ ಇಲಾಖೆ ರಾಜ್ಯ ಸರ್ಕಾರದ ಮನವಿಯ ಮೇರೆಗೆ ಸುಮಾರು 89,540 ಮೆಟ್ರಿಕ್ ಟನ್ ನಷ್ಟು ಹೆಚ್ಚುವರಿ ಅಕ್ಕಿಯನ್ನು ನೀಡಿದ್ದು, 100 ಮೆಟ್ರಿಕ್ ಟನ್ ನಷ್ಟು ಕಾಳುಗಳನ್ನು ಪೂರೈಕೆ ಮಾಡಲಾಗುತ್ತಿದೆ.
ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸುವುದಕ್ಕಾಗಿ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಈಗಾಗಲೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಕೋಟಿ ರೂಪಾಯಿ ನೆರವು ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


