ಕೇರಳದಲ್ಲಿ ನೌಕಪಡೆ ರಕ್ಷಣಾ ಕಾರ್ಯಾಚರಣೆ ಅಂತ್ಯ
ಪ್ರವಾಹ ಪೀಡಿತ ಕೇರಳದಲ್ಲಿ 14 ದಿನಗಳಿಂದಲೂ ರಕ್ಷಣಾ ಕಾರ್ಯಾಚರಣೆ ನಡೆಸಿದ ದಕ್ಷಿಣ ನೌಕಪಡೆ ರಕ್ಷಣಾ ಕಾರ್ಯಾಚರಣೆಯನ್ನು ಅಂತ್ಯಗೊಳಿಸಿದೆ.

Published On :
ಕೊಚ್ಚಿ: ಪ್ರವಾಹ ಪೀಡಿತ ಕೇರಳದಲ್ಲಿ 14 ದಿನಗಳಿಂದಲೂ ರಕ್ಷಣಾ ಕಾರ್ಯಾಚರಣೆ ನಡೆಸಿದ ದಕ್ಷಿಣ ನೌಕಪಡೆ ರಕ್ಷಣಾ ಕಾರ್ಯಾಚರಣೆಯನ್ನು ಅಂತ್ಯಗೊಳಿಸಿದೆ.
ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಸ್ಥಳಾಂತರಿಸುವಿಕೆಗೆ ಹೆಚ್ಚಿನ ಮನವಿ ಬರುತ್ತಿಲ್ಲ ಎಂದು ನೌಕಪಡೆ ಹೇಳಿಕೆಯಲ್ಲಿ ತಿಳಿಸಿದೆ.
ಕೇರಳ ಸರ್ಕಾರದ ಸಹಯೋಗದಲ್ಲಿ ಆಗಸ್ಟ್ 9 ರಿಂದಲೂ ಆಪರೇಷನ್ ಮ್ಯಾಡದ್ ಕಾರ್ಯಾಚರಣೆ ಕೈಗೊಂಡು ಒಟ್ಟಾರೇ, ಸುಮಾರು 16, 005 ಜನರನ್ನು ರಕ್ಷಿಸಲಾಗಿದೆ ಎಂದು ರಕ್ಷಣಾ ಇಲಾಖೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕೇರಳ ವಿಪತ್ತು ನಿರ್ವಹಣಾ ನಿಯಂತ್ರಣ ಕೇಂದ್ರದ ಮಾಹಿತಿ ಪ್ರಕಾರ ಆಗಸ್ಟ್ 8 ರಿಂದಲೂ ಉಂಟಾದ ಭೀಕರ ಪ್ರವಾಹದಿಂದಾಗಿ 231 ಜನರು ಮೃತಪಟ್ಟಿದ್ದು, 32 ಜನರು ನಾಪತ್ತೆಯಾಗಿದ್ದಾರೆ. 3.91 ಲಕ್ಷ ಕುಟುಂಬಕ್ಕೆ ಸೇರಿದ ಸುಮಾರು 14.50 ಲಕ್ಷ ಜನರು ಇಂದಿಗೂ ರಾಜ್ಯದಾದ್ಯಂತ ತೆರಿದಿರುವ 3 879 ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


