ದೇಶ

ರಫೆಲ್ ವಿವಾದ: ಕಾಂಗ್ರೆಸ್ ನಾಯಕರಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ರಿಲಯನ್ಸ್

ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ. ಬೇಕಾಬಿಟ್ಟಿ ಮಾತನಾಡಿದರೆ...

ರಫೆಲ್ ವಿವಾದ: ಕಾಂಗ್ರೆಸ್ ನಾಯಕರಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ರಿಲಯನ್ಸ್
ರಾಹುಲ್ ಗಾಂಧಿ
Published On :
ದೆಹಲಿ: ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ. ಬೇಕಾಬಿಟ್ಟಿ ಮಾತನಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕರಿಗೆ ರಿಲಯನ್ಸ್ ಗ್ರೂಪ್ ಬುಧವಾರ ಎಚ್ಚರಿಕೆ ನೀಡಿದೆ.
ರಫೆಲ್ ಅವ್ಯವಹಾರದಲ್ಲಿ ರಿಲಯನ್ಸ್ ಪಾತ್ರವಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್ ನ ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್, ರಿಲಯನ್ಸ್ ಡಿಫೆನ್ಸ್ ಮತ್ತು ರಿಲಯನ್ಸ್ ಏರೋಸ್ಟ್ರಕ್ಚರ್ ಕಂಪನಿಗಳು ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ ​ಗಿಲ್ ಅವರಿ​​ಗೆ ನೊಟೀಸ್ ನೀಡಿದ್ದು, ಒಂದು ವೇಳೆ ಕಂಪನಿ ವಿರುದ್ಧ ಮಾತನಾಡುವುದನ್ನು ಮುಂದುವರೆಸಿದಲ್ಲಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿವೆ.
ರಾಜಕಾರಣಿಗಳಿಗೆ ಮಾತನಾಡುವ ಹಕ್ಕಿದೆ ಎಂದ ಮಾತ್ರಕ್ಕೆ ಅವರು ಬೇಜವಬ್ದಾರಿಯಾಗಿ ಹೇಳಿಕೆ ನೀಡಬಹದು ಎಂದು ಎಲ್ಲಿಯೂ ಬರೆದಿಲ್ಲ! ಬೇಕಾಬಿಟ್ಟಿ ಮಾತನಾಡುವುದು, ಅಸಂಬದ್ಧ ಹೇಳಿಕೆ ನೀಡುವುದು, ಸುಳ್ಳು ಆರೋಪ ಮಾಡುವುದು ಇವೆಲ್ಲವನ್ನೂ ನಾವು ಸಹಿಸೋಲ್ಲ. ಇಂಥ ಕೆಲಸ ಮಾಡಿದರೆ ಕಾನೂನಾತ್ಮಕ ಕ್ರಮ ಎದುರಿಸಬೇಕಾಗುತ್ತದೆ ಎಂದು ರಿಲಯನ್ಸ್ ಗ್ರೂಪ್, ಎಚ್ಚರಿಸಿದೆ.
ನೋಟಿಸ್ ನಲ್ಲಿ ಕಾಂಗ್ರೆಸ್ ನಾಯಕರಾದ ರಂದೀಪ್ ಸುರ್ಜೇವಾಲ, ಅಶೋಕ್ ಚವ್ಹಾಣ್, ಸಂಜಯ್ ನಿರೂಪಮ್, ಅನುರಾಗ್ ನಾರಾಯಣ್ ಸಿಂಗ್ ಓಮನ್ ಚಾಂಡಿ, ಶಕ್ತಿ ಸಿನ್ಹಾ ಗೋಹಿಲ್, ಅಭಿಶೇಕ್ ಮನು ಸಿಂಘ್ವಿ, ಸುನಿಲ್ ಕುಮಾರ್ ಜಾಖರ್ ಹಾಗೂ ಪ್ರಿಯಾಂಕ ಚತರ್ವೇದಿ ಅವರ ಹೆಸರನ್ನು ಉಲ್ಲೇಖಿಸಲಾಗಿದ್ದು, ಈ ಎಲ್ಲಾ ನಾಯಕರು ನಮ್ಮ ಕಂಪನಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.