ಸ್ವಾತಂತ್ರೋತ್ಸವ ದಿನ ರಾಷ್ಟ್ರಗೀತೆ ಹಾಡಲು ಅಡ್ಡಿಪಡಿಸಿದ ಮದರಸದ ಮಾನ್ಯತೆ ರದ್ದು!
ಸ್ವಾತಂತ್ರ್ಯ ದಿನಾಚರಣೆ ದಿನ ಮಕ್ಕಳಿಗೆ ರಾಷ್ಟ್ರಗೀತೆ ಹಾಡಲು ಅಡ್ಡಿಪಡಿಸಿದ ಮದರಸದ ಮಾನ್ಯತೆಯನ್ನು ಉತ್ತರ ಪ್ರದೇಶ ಸರ್ಕಾರ ರದ್ದುಪಡಿಸಿ ಆದೇಶ ಹೊರಡಿಸಿದೆ...

Published On :
ಲಖನೌ: ಸ್ವಾತಂತ್ರ್ಯ ದಿನಾಚರಣೆ ದಿನ ಮಕ್ಕಳಿಗೆ ರಾಷ್ಟ್ರಗೀತೆ ಹಾಡಲು ಅಡ್ಡಿಪಡಿಸಿದ ಮದರಸದ ಮಾನ್ಯತೆಯನ್ನು ಉತ್ತರ ಪ್ರದೇಶ ಸರ್ಕಾರ ರದ್ದುಪಡಿಸಿ ಆದೇಶ ಹೊರಡಿಸಿದೆ.
ಮಹಾರಾಜಗಂಜ್ ನ ಮದರಸದಲ್ಲಿ ಪ್ರಾಂಶುಪಾಲರು ಹಾಗೂ ಧರ್ಮಗುರು ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ವೇಳೆ ರಾಷ್ಟ್ರಗೀತೆ ಹಾಡುವುದಕ್ಕೆ ಅಡ್ಡಿಪಡಿಸಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಮದರಸ ಎಜುಕೇಶನ್ ಬೋರ್ಡ್ ನ ರಿಜಿಸ್ಟ್ರಾರ್ ಎಸ್ ಎನ್ ಪಾಂಡೆ ಅವರು ಮದರಸಕ್ಕೆ ಸರ್ಕಾರದಿಂದ ಯಾವುದೇ ರೀತಿಯ ಹಣಕಾಸು ನೆರವು ಇತ್ಯಾದಿಗಳನ್ನು ನಿಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿ ನಡೆಸಿದ ತನಿಖೆಯ ಆಧಾರದ ಮೇಲೆ ಮಹಾರಾಜಗಂಜ್ ಜಿಲ್ಲೆಯಲ್ಲಿರುವ ಮಲಾಂಗ್ಡಿಹ್ನ ಅರೇಬಿಯಾ ಅಹ್ಲೆ ಸುನ್ನತ್ ಅನ್ವಾರೆ ತಯ್ಯಬ ಗರ್ಲ್ಸ್ ಕಾಲೇಜಿನ ಮಾನ್ಯತೆ ರದ್ದುಗೊಳಿಸಲಾಗಿದೆ.
ರಾಷ್ಟ್ರಗೀತೆ ಹಾಡುವ ವೇಳೆ ಪ್ರಾಂಶುಪಾಲ ಫೈಯಾಸ್ ರೆಹ್ಮಾನ್ ಹಾಗೂ ಧರ್ಮಗುರು ಜುನೈದ್ ಅನ್ಸಾರಿ ಅಡ್ಡಿಪಡಿಸಿದ್ದರು. ಇದಕ್ಕೆ ಮದರಸದ ವಿಜ್ಞಾನ ಶಿಕ್ಷಕ ಸುನಿಲ್ ತ್ರಿಪಾಟಿ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರ ಪ್ರದೇಶIndependence DayMadrassaNational Anthem rowರಾಷ್ಟ್ರಗೀತೆ ವಿವಾದಮದರಸಸ್ವಾತಂತ್ರೋತ್ಸವ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


