ದೇಶ

ಉನ್ನಾವೋ ಪ್ರಕರಣದ ಸಾಕ್ಷಿ ಅನುಮಾನಾಸ್ಪದ ಸಾವು: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ

ಉನ್ನಾವೋ ಅತ್ಯಾಚಾರ ಪ್ರಕರಣದ ಸಾಕ್ಷಿಯ ಅನುಮಾನಾಸ್ಪದ ಸಾವಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉನ್ನಾವೋ ಪ್ರಕರಣದ ಸಾಕ್ಷಿ ಅನುಮಾನಾಸ್ಪದ ಸಾವು: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ
ರಾಹುಲ್ ಗಾಂಧಿ
Published On :
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಸಾಕ್ಷಿಯ ಅನುಮಾನಾಸ್ಪದ ಸಾವಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಬಿಜೆಪಿ ಶಾಸಕ ಕುಲ್ದೀಪ್ ಸೆಂಗಾರ್ ಆರೋಪಿಯಾಗಿರುವ ಪ್ರಕರಣದ ಸಾಕ್ಷಿ ಒಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಶವಪರೀಕ್ಷೆಯನ್ನೂ ಮಾಡದೇ ಅಂತ್ಯಕ್ರಿಯೆ ನಡೆಸಲಾಗಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಸಾಕ್ಷ್ಯ ಮೃತಪಟ್ಟಿರುವ ಘಟನೆಯಲ್ಲಿ ಷಡ್ಯಂತ್ರ ನಡೆಸಲಾಗಿರುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ. ಇದು ನೀವು ಹೆಣ್ಣು ಮಕ್ಕಳಿಗೆ ನ್ಯಾಯ ಒದಗಿಸುವ ವಿಧಾನವ ಮಿಸ್ಟರ್ 56 ಎಂದು ಟ್ವೀಟ್ ಮೂಲಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.