ಖ್ಯಾತ ಹಿರಿಯ ಪತ್ರಕರ್ತ ಕುಲ್ದೀಪ್ ನಯ್ಯರ್ ಇನ್ನಿಲ್ಲ
ಹಿರಿಯ ಪತ್ರಕರ್ತ ಕುಲ್ದೀಪ್ ನಯ್ಯರ್ ಬುಧವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ. 95 ವರ್ಷ ವಯಸ್ಸಿನ ನಯ್ಯರ್ ದೆಹಲಿಯ ಆಸ್ಪತ್ರೆಯಲ್ಲಿ ತಮ್ಮ ...

Published On :
ನವದೆಹಲಿ: ಹಿರಿಯ ಪತ್ರಕರ್ತ ಕುಲ್ದೀಪ್ ನಯ್ಯರ್ ಬುಧವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ. 95 ವರ್ಷ ವಯಸ್ಸಿನ ನಯ್ಯರ್ ದೆಹಲಿಯ ಆಸ್ಪತ್ರೆಯಲ್ಲಿ ತಮ್ಮ ಕೊನೆಯುಸಿರೆಳೆದಿದ್ದಾರೆ.
ಲೋಧಿ ರಸ್ತೆಯ ಸ್ಮಶಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಉರ್ದು ಪತ್ರಿಕಾ ವರದಿಗಾರನಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಕುಲದೀಪ್ ನಯ್ಯರ್ ಹಲವು ದಶಕಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು.
ಅವರು ಭಾರತದ ಒಬ್ಬ ಹಿರಿಯ ಪತ್ರಕರ್ತರು, ಪತ್ರಿಕಾ ಅಂಕಣಕಾರರು, ಮಾನವಹಕ್ಕು ಕಾರ್ಯಕರ್ತರು ಮತ್ತು ಲೇಖಕರು. ಅವರು ದಿ ಸ್ಟೇಟ್ಸ್ ಪತ್ರಿಕೆಯ ಸಂಪಾದಕರಾಗಿದ್ದರು. ಪತ್ರಿಕೋದ್ಯಮದ ಹೊರತಾಗಿ ಅವರು ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದರು.
ಕುಲದೀಪ್ ನಯ್ಯರ್ 1923 ರಂದು ಸಾಯಾಲ್ಕೋಟದಲ್ಲಿ ಜನಿಸಿದರು. ಕುಲ್ದೀಪ್ ನಯ್ಯರ್ ಲಾಹೋರ ನಲ್ಲಿ ಕಾನೂನು ಪದವಿಯನ್ನು ಪಡೆದರು. ಅವರು ಯುಎಸ್ಎ ಪತ್ರಿಕೋದ್ಯಮ ಪದವಿ ಪಡೆದರು. ಅಲ್ಲದೆ ತತ್ವಶಾಸ್ತ್ರದಲ್ಲಿ ಪಿಎಚ್ ಡಿ ಪಡೆದಿದ್ದರು.
ಅವರು ಹಲವು ವರ್ಷಗಳ ಕಾಲ ಭಾರತದ ಸರ್ಕಾರದ ಪ್ರೆಸ್ ಇನ್ಫಾರ್ಮೇಶನ್ ಆಫೀಸರ್ ಆಗಿ ಕಾರ್ಯನಿರ್ವಹಿಸಿದ್ದರು. ಇದರ ನಂತರ, ಅವರು ಯುಎನ್ಐ, ಪಿಐಬಿ, ದಿ ಸ್ಟೇಟ್ಸ್ಮನ್ ಮತ್ತು ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಅವರು ದೀರ್ಘಕಾಲದ ಸಂಬಂಧ ಹೊಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


