ನೌಕಪಡೆಗೆ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 111 ಹೆಲಿಕಾಪ್ಟರ್ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ
ಮಹತ್ವದ ಬೆಳವಣಿಗೆಯೊಂದರಲ್ಲಿ ಸುಮಾರು 21 ಸಾವಿರ ಕೋಟಿ ರೂ. ವೆಚ್ಚದಲ್ಲಿ ನೌಕಪಡೆಗಾಗಿ 111 ಬಳಕೆಯ ಹೆಲಿಕಾಪ್ಟರ್ ಖರೀದಿಸಲು ರಕ್ಷಣಾ ಸಚಿವಾಲಯ ಇಂದು ಅನುಮೋದನೆ ನೀಡಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸುಮಾರು 21 ಸಾವಿರ ಕೋಟಿ ರೂ. ವೆಚ್ಚದಲ್ಲಿ ನೌಕಪಡೆಗಾಗಿ 111 ಬಳಕೆಯ ಹೆಲಿಕಾಪ್ಟರ್ ಖರೀದಿಸಲು ರಕ್ಷಣಾ ಸಚಿವಾಲಯ ಇಂದು ಅನುಮೋದನೆ ನೀಡಿದೆ.
ಹೆಲಿಕಾಪ್ಟರ್ ಸ್ವಾಧೀನ ಸೇರಿದಂತೆ ಸುಮಾರು 46 ಸಾವಿರ ಕೋಟಿ ರೂಪಾಯಿ ಮೌಲ್ಯದ ಖರೀದಿ ಪ್ರಸ್ತಾವವನ್ನು ಸಚಿವಾಲಯ ಪೂರ್ಣಗೊಳಿಸಿದೆ ಎಂದು ತಿಳಿದುಬಂದಿದೆ. ರಕ್ಷಣಾ ಇಲಾಖೆಯ (ಡಿಎಸಿ) ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಭಾರತೀಯ ನೌಕಪಡೆಗಾಗಿ ಸುಮಾರು 21 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 111 ಬಳಕೆಯ ಹೆಲಿಕಾಪ್ಟರ್ ಖರೀದಿಗೆ ರಕ್ಷಣಾ ಇಲಾಖೆಯ ಸಭೆ ಅನುಮೋದನೆ ನೀಡಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆಗಾಗಿ ಅಂದಾಜು 3, 364 ಕೋಟಿ ರೂ. ವೆಚ್ಚದಲ್ಲಿ ಸ್ವದೇಶಿ ವಿನ್ಯಾಸ ಹಾಗೂ ಅಭಿವೃದ್ದಿಯ 155 ಎಂಎಂ ಎಳೆದ ಫಿರಂಗಿ ಗನ್ ವ್ಯವಸ್ಥೆಯ ಸ್ವಾಧೀನ ಸೇರಿದಂತೆ ಅಂದಾಜು 24, 879 ಕೋಟಿ ರೂ. ವೆಚ್ಚದಲ್ಲಿ ಇನ್ನಿತರ ಖರೀದಿ ಪ್ರಸ್ತಾವನೆಗೆ ರಕ್ಷಣಾ ಇಲಾಖೆ ಸಭೆ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


