ದೇಶ

ರಫೆಲ್ ಒಪ್ಪಂದದಲ್ಲಿ ಸರ್ಕಾರ ನಿಯಮ ಮುರಿದಿದೆ: ಮಾಜಿ ಸಚಿವ ಚಿದಂಬರಂ ಆರೋಪ

ರಫೆಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ...

ರಫೆಲ್ ಒಪ್ಪಂದದಲ್ಲಿ ಸರ್ಕಾರ ನಿಯಮ ಮುರಿದಿದೆ: ಮಾಜಿ ಸಚಿವ ಚಿದಂಬರಂ ಆರೋಪ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ರಫೆಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ, ಕೇಂದ್ರ ಸರ್ಕಾರ ರಕ್ಷಣಾ ಸ್ವಾಧೀನ ಪ್ರಕ್ರಿಯೆಯನ್ನು ನಿರ್ಲಕ್ಷಿಸಿದ್ದು ಒಪ್ಪಂದ ಮಾಡಿಕೊಳ್ಳುವ ಸಂದರ್ಭದಲ್ಲಿ ಹಲವು ನಿಯಮಗಳನ್ನು ಉಲ್ಲಂಘಿಸಿದೆ ಎಂದಿದ್ದಾರೆ.

ರಫೆಲ್ ಯುದ್ಧ ವಿಮಾನ ಒಪ್ಪಂದ ಮಾಡಿಕೊಳ್ಳುವ ಸಂದರ್ಭದಲ್ಲಿ ಸರ್ಕಾರ ಭದ್ರತಾ ಸಂಪುಟ ಸಮಿತಿಯನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದಿದ್ದಾರೆ.

 ರಫೆಲ್ ಒಪ್ಪಂದದಲ್ಲಿ ರಕ್ಷಣಾ ಸ್ವಾಧೀನ ಪ್ರಕ್ರಿಯೆಯನ್ನು ಏಕೆ ತಿರಸ್ಕರಿಸಲಾಯಿತು ಮತ್ತು ಒಪ್ಪಂದ ಸಮಾಲೋಚನಾ ಸಮಿತಿ ಮತ್ತು ಬೆಲೆ ಸಮಾಲೋಚನಾ ಸಮಿತಿಯನ್ನು ಏಕೆ ಇದರಿಂದ ದೂರವಿಡಲಾಗಿದೆ. ಭದ್ರತೆಗೆ ಸಂಬಂಧಪಟ್ಟ ಸಂಪುಟ ಸಮಿತಿಯನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಯುಪಿಎ ಸರ್ಕಾರದ ಆಡಳಿತಾವಧಿಯಲ್ಲಿ ಮತ್ತು ಇಂದಿನ ಎನ್ ಡಿಎ ಸರ್ಕಾರದಲ್ಲಿ ಪ್ರತಿ ವಿಮಾನದ ಖರೀದಿ ಬೆಲೆಯಲ್ಲಿ ಬಹಳ ವ್ಯತ್ಯಾಸವಿದೆ. ಯುಪಿಎ ಅವಧಿಯಲ್ಲಿ ಪ್ರತಿ ವಿಮಾನದ ಗುತ್ತಿಗೆ ಬೆಲೆ 526 ಕೋಟಿ ರೂಪಾಯಿಗಳಾಗಿದ್ದವು. ಎನ್ ಡಿಎ ಗುತ್ತಿಗೆ ಬೆಲೆ ಪ್ರತಿ ವಿಮಾನಕ್ಕೆ 1,670 ಕೋಟಿ ರೂಪಾಯಿ ಎಂದು ಹೇಳುತ್ತಿದೆ. ಈ ಮೊತ್ತ ಸರಿಯಾಗಿದ್ದರೆ ಈಗ ವಿಮಾನದ ಬೆಲೆ ಮೂರು ಪಟ್ಟು ಅಧಿಕ ಏಕೆ ಆಗಿದೆ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.