ಮಾಲೆಗಾಂವ್ ಸ್ಫೋಟ: ಕಿರುಕುಳದ ಬಗ್ಗೆ ಎಸ್ಐಟಿ ತನಿಖೆ ಕೋರಿದ ಪುರೋಹಿತ್
2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಲೆಫ್ಟಿನೆಂಟ್ ಕರ್ನಲ್ ಶ್ರೀಕಾಂತ್ ಪ್ರಸಾದ್ ಪುರೋಹಿತ್ ಅವರು...

Published On :
ನವದೆಹಲಿ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಲೆಫ್ಟಿನೆಂಟ್ ಕರ್ನಲ್ ಶ್ರೀಕಾಂತ್ ಪ್ರಸಾದ್ ಪುರೋಹಿತ್ ಅವರು ಉಗ್ರ ನಿಗ್ರಹ ದಳ(ಎಟಿಎಸ್)ದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ತಮಗೆ ಕಿರುಕುಳ ನೀಡಿದ ಬಗ್ಗೆ ಎಸ್ ಐಟಿ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಮಾಲೆಗಾಂವ್ ಸ್ಫೋಟದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪದ ಮೇಲೆ ಪುರೋಹಿತ್ ಅವರನ್ನು 2008ರಲ್ಲಿ ಬಂಧಿಸಲಾಗಿತ್ತು. ಸತತ ಒಂಬತ್ತು ವರ್ಷಗಳ ಜೈಲುವಾಸದ ನಂತರ ಕಳೆದ ವರ್ಷ ಆಗಸ್ಟ್ ನಲ್ಲಿ ಜಾಮೀನು ಪಡೆದುಕೊಂಡಿದ್ದರು.
ಮಾಧ್ಯಮಗಳ ವರದಿಯ ಪ್ರಕಾರ, ಎಟಿಎಸ್ ವಶದಲ್ಲಿದ್ದಾಗ ಪುರೋಹಿತ್ ಮೇಲೆ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಲಾಗಿದೆ.
ನಾಸಿಕ್ನ ಮಾಲೆಗಾಂವ್ನ ಭೀಕು ಚೌಕ್ನಲ್ಲಿ 2008ರ ಸೆಪ್ಟೆಂಬರ್ 29 ರಂದು ನಡೆದ ಬಾಂಬ್ ಸ್ಫೋಟದಲ್ಲಿ 6 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SIT probeಮಾಲೆಗಾಂವ್ ಸ್ಫೋಟಎಸ್ ಐಟಿ ತನಿಖೆMalegaon blasts:Lieutenant Colonel Shrikant Purohitಲೆಫ್ಟಿನೆಂಟ್ ಕರ್ನಲ್ ಶ್ರೀಕಾಂತ್ ಪ್ರಸಾದ್ ಪುರೋಹಿತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


