ಅಜಂ ಖಾನ್ ನನ್ನ ಪುತ್ರಿಗೆ 'ಆ್ಯಸಿಡ್ ದಾಳಿ' ಬೆದರಿಕೆ ಹಾಕಿದ್ದಾರೆ: ಅಮರ್ ಸಿಂಗ್
ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ನನ್ನ ಅಪ್ರಾಪ್ತ ಪುತ್ರಿಯ ಮೇಲೆ ಆ್ಯಸಿಡ್ ದಾಳಿ ಮಾಡುವ ಬೆದರಿಕೆ ಹಾಕಿದ್ದು, ಇದರಿಂದ ನನ್ನ ಪುತ್ರಿ ಶಾಲೆಗೆ ಹೋಗಲು ಹೆದರುತ್ತಿದ್ದಾಳೆ ಎಂದು ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.

Published On :
ಲಖನೌ: ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ನನ್ನ ಅಪ್ರಾಪ್ತ ಪುತ್ರಿಯ ಮೇಲೆ ಆ್ಯಸಿಡ್ ದಾಳಿ ಮಾಡುವ ಬೆದರಿಕೆ ಹಾಕಿದ್ದು, ಇದರಿಂದ ನನ್ನ ಪುತ್ರಿ ಶಾಲೆಗೆ ಹೋಗಲು ಹೆದರುತ್ತಿದ್ದಾಳೆ ಎಂದು ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.
ಸಮಾಜವಾದಿ ಪಕ್ಷದ ಉಚ್ಛಾಟಿತ ನಾಯಕ ಅಮರ್ ಸಿಂಗ್ ಅಜಂ ಖಾನ್ ರನ್ನು ಪರೋಕ್ಷವಾಗಿ ದೇಶದ್ರೋಹಿ ಎಂದು ಕರೆದಿದ್ದು, ಅವರು ಈ ದೇಶದಲ್ಲಿ ಜೀವಿಸಲು ಯೋಗ್ಯರಲ್ಲ. ದೇಶ ವಿಭಜನೆ ಸಂದರ್ಭದಲ್ಲಿ ಉಂಟಾಗದ ಕೋಮುಗಲಭೆ ಅವರು ಅಧಿಕಾರದಲ್ಲಿದ್ದಾಗ ವ್ಯಾಪಕವಾಗಿ ಆಗಿತ್ತು ಎಂದು ಕಿಡಿಕಾರಿದ್ದಾರೆ. ಅಲ್ಲದೆ ತಮ್ಮ ಪತ್ನಿ ಮತ್ತು ಮಗಳ ಮೇಲೆ ಆ್ಯಸಿಡ್ ದಾಳಿ ಮಾಡಿ ನನ್ನನ್ನು ಕೊಲ್ಲಬೇಕು ಎಂದು ಅಜಂ ಖಾನ್ ಹೇಳಿದ್ದರು ಎಂದು ಅಮರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.
ಇದೇ ವೇಳೆ ಗವರ್ನರ್ ರಾಮ್ ನಾಯ್ಕ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ದೂರು ನೀಡುತ್ತೇನೆ ಎಂದು ಅಮರ್ ಸಿಂಗ್ ಹೇಳಿದ್ದಾರೆ. ಅಂತೆಯೇ ನನ್ನ ಮಗಳಿಗೆ ಮತ್ತು ನನ್ನ ಕುಟುಂಬಕ್ಕೆ ಭದ್ರತೆಯ ಅಗತ್ಯತೆ ಇದ್ದು, ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇನೆ. ಅಜಂ ಖಾನ್ ನೇತೃತ್ವದ ರಾಮ್ ಪುರದ ಮೌಲಾನ ಮಹಮದ್ ಅಲಿ ಜವಹರ್ ವಿವಿಗೆ ಬರುತ್ತಿರುವ ಆದಾಯದ ಮೂಲದ ಕುರಿತೂ ಸುಧೀರ್ಘ ತನಿಖೆಯಾಗಬೇಕು ಎಂದು ಆಗ್ರಹಿಸಿರುವ ಅಮರ್ ಸಿಂಗ್ ವಿವಿಯ ಚಾನ್ಸಿಲರ್ ರನ್ನು ತೀವ್ರ ವಿಚಾರಣೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರ ಪ್ರದೇಶAzam KhanಲಖನೌLucknowಅಜಂ ಖಾನ್Amar Singhಅಮರ್ ಸಿಂಗ್ಬೆದರಿಕೆ ಪ್ರಕರಣThreatening Case
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


