1984ರ ದಂಗೆಯಲ್ಲಿ ಕಾಂಗ್ರೆಸ್ ಪಕ್ಷವಲ್ಲ, ಕೆಲ ಕೈ ನಾಯಕರು ಭಾಗಿಯಾಗಿದ್ದರು: ಸಿಎಂ ಅಮರೀಂದರ್ ಸಿಂಗ್
1984ರ ದಂಗೆಯಲ್ಲಿ ಕಾಂಗ್ರೆಸ್ ಪಕ್ಷವಲ್ಲ, ಕೆಲ ಕೈ ನಾಯಕರು ಭಾಗಿಯಾಗಿದ್ದರು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

Published On :
ನವದೆಹಲಿ: 1984ರ ದಂಗೆಯಲ್ಲಿ ಕಾಂಗ್ರೆಸ್ ಪಕ್ಷವಲ್ಲ, ಕೆಲ ಕೈ ನಾಯಕರು ಭಾಗಿಯಾಗಿದ್ದರು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
1984 ಸಿಖ್ ದಂಗೆ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ವಿಚಾರ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿರುವಂತೆಯೇ ಇತ್ತ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು, 1984ರ ದಂಗೆಯಲ್ಲಿ ಕೆಲ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅಮರೀಂದರ್ ಸಿಂಗ್ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆ ಬಳಿಕ ಸಿಖ್ ದಂಗೆ ನಡೆಯಿತು. ಆ ವೇಳೆ ಪ್ರಧಾನಿ ರಾಜೀವ್ ಗಾಂಧಿ ಬಂಗಾಳದ ಏರ್ ಪೋರ್ಟ್‌ನಲ್ಲಿದ್ದರು. ಈ ವೇಳೆ ಕೆಲ ಕಾಂಗ್ರೆಸ್ ನಾಯಕರು ಬಿಟ್ಟು ಉಳಿದ ಯಾರೂ ಅದರಲ್ಲಿ ಭಾಗಿಯಾಗಿಲ್ಲ. ಸಜ್ಜನ್ ಕುಮಾರ್, ಧರ್ಮದಾಸ್ ಶಾಸ್ತ್ರಿ, ಅರ್ಜುನ್ ದಾಸ್ ಹಾಗೂ ಇನ್ನೆರಡು ಮಂದಿ ಭಾಗಿಯಾಗಿದ್ದರು ಎಂದು ಹೇಳಿದ್ದಾರೆ.
ಅತ್ತ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಈ ಹೇಳಿಕೆಗೆ ವಿರೋಧ ವ್ಯಕ್ತ ಪಡಿಸಿರುವ ಶಿರೋಮಣಿ ಅಕಾಲಿದಳ, ಈ ದಂಗೆಯ ಮುಖ್ಯ ಆರೋಪಿ ಜಗದೀಶ್ ಟೈಟ್ಲರ್ ಹೆಸರು ಹೇಳಿಲ್ಲ ಎಂದು ಆಕ್ಷೇಪ ವ್ಯಕ್ತ ಪಡಿಸಿದೆ. ಅಲ್ಲದೆ ಕೂಡಲೇ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿCongressNew DelhiRahul Gandhiರಾಹುಲ್ ಗಾಂಧಿ1984 Sikh riotAmarinder Singhಅಮರೀಂದರ್ ಸಿಂಗ್1984ರ ಸಿಖ್ ದಂಗೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


