ಎನ್'ಸಿ ನಾಯಕನ ಮೇಲೆ ಉಗ್ರರ ದಾಳಿ: ಉಗ್ರರ ಯತ್ನ ವಿಫಲಗೊಳಿಸಿದ ಭದ್ರತಾ ಪಡೆಗಳು
ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಮಾಜಿ ಸಚಿವ ಅಬ್ದುಲ್ ರಹೀಲ್ ರಾಥೆರ್ ಅವರ ಮೇಲೆ ಉಗ್ರರು ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದೆ...

Published On :
ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಮಾಜಿ ಸಚಿವ ಅಬ್ದುಲ್ ರಹೀಲ್ ರಾಥೆರ್ ಅವರ ಮೇಲೆ ಉಗ್ರರು ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದೆ.
ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿರುವ ಅಬ್ದುಲ್ ರಹೀಮ್ ಅವರ ಮೇಲೆ ಉಗ್ರರು ದಾಳಿ ನಡೆಸಿದ್ದು, ಭದ್ರತಾ ಪಡೆಗಳ ಬಂದೂಕುಗಳನ್ನು ಕಿತ್ತುಕೊಳ್ಳಲು ಯತ್ನ ನಡೆಸಿದ್ದಾರೆ. ಈ ವೇಳೆ ಉಗ್ರರಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾ ಪಡೆಗಳು ಉಗ್ರರನ್ನು ಹಿಮ್ಮೆಟ್ಟಿಸಿದ್ದಾರೆಂದು ವರದಿಗಳು ತಿಳಿಸಿವೆ.
ಬುದ್ಗಾಮ್ ಜಿಲ್ಲೆಯ ಬಂಡಿಪೊರಾದಲ್ಲಿರುವ ರಹೀಮ್ ಅವರ ನಿವಾಸದ ಬಳಿ ಇಂದು ಬೆಳಿಗ್ಗೆ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರಿಗೆ ದಿಟ್ಟ ಉತ್ತರ ನೀಡಿ ಉಗ್ರರು ಸ್ಥಳದಿಂದ ಕಾಲ್ಕಿತ್ತುವಂತೆ ಭದ್ರತಾ ಪಡೆಗಳು ಮಾಡಿದ್ದಾರೆ.
ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ರಹೀಮ್ ಅವರು ಮನೆಯಲ್ಲಿರಲಿಲ್ಲ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.
ಈ ನಡುವೆ ಪೂಂಚ್ ಜಿಲ್ಲೆಯ ಮಂಧಾರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉಗ್ರರುattackKashmirದಾಳಿterroristಕಾಶ್ಮೀರನ್ಯಾಷನಲ್ ಕಾನ್ಫರೆನ್ಸ್ ನಾಯಕAbdul Rahim RatherNC leaderಅಬ್ದುಲ್ ರಹೀಮ್ ರಾಥೆರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


