2019 ರ ಲೋಕಸಭಾ ಚುನಾವಣೆ ಮೇಲೆ ಕಣ್ಣು : ಬಿಜೆಪಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರಿಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ಪಕ್ಷ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರಿಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ಪಕ್ಷ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ತಾನ ಸೇರಿದಂತೆ ಬಿಜೆಪಿ ಆಡಳಿತವಿರುವ 15 ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದಾರೆ.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದು, ನಿರ್ದೇಶನ ನೀಡಲಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಅನುಸರಿಸಬೇಕಾದ ಕಾರ್ಯತಂತ್ರ ಕುರಿತಂತೆ ಚರ್ಚಿಸಲಾಗುತ್ತಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಗಢ ರಾಜ್ಯಗಳಲ್ಲಿ ಈ ವರ್ಷದ ನಂತರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರಮೋದಿ ಅಧಿಕಾರಕ್ಕೆ ಬಂದ ನಂತರ ಬಡವರಿಗಾಗಿ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಉತ್ತಮ ಆಡಳಿತದ ಬಗ್ಗೆ ಜನರಿಗೆ ಯಾವ ರೀತಿ ಮನವರಿಕೆ ಮಾಡಿಕೊಡಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


