ದೇಶ

ಅಪಘಾತದಲ್ಲಿ ನಟ ನಂದಮೂರಿ ಹರಿಕೃಷ್ಣ ದುರ್ಮರಣ

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ನಂದಮೂರಿ ತಾರಕ ರಾಮಾರಾವ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಅವರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ...

ಅಪಘಾತದಲ್ಲಿ ನಟ ನಂದಮೂರಿ ಹರಿಕೃಷ್ಣ ದುರ್ಮರಣ
ನಂದಮೂರಿ ಹರಿಕೃಷ್ಣ
Published On :
ಹೈದರಾಬಾದ್: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ನಂದಮೂರಿ ತಾರಕ ರಾಮಾರಾವ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಅವರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. 
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅನ್ನೇಪರ್ತಿ ಬಳಿ ನಂದಮೂರಿ ಹರಿಕೃಷ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಹರಿಕೃಷ್ಣ ಅವರು ಭೀಕರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 
ಕಾಮಿನೇನಿ ಆಸ್ಪತ್ರೆಯಲ್ಲಿ ಹರಿಕೃಷ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಹರಿಕೃಷ್ಣ ಅವರು ಅಭಿಮಾನಿಯ ಪುತ್ರನ ಮದುವೆಗೆ ತೆರಳುತ್ತಿದ್ದರು. ಬೆಳಗ್ಗೆ 4.30ರ ಸುಮಾರಿನಲ್ಲಿ ಹೈದರಾಬಾದ್ ನಿಂದ ಆಂಧ್ರಪ್ರದೇಶದ ನಲ್ಲೂರಿಗೆ ತಾವೇ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಹರಿಕೃಷ್ಣ ಅವರು ಬಾಲನಟನಾಗಿ ಹಾಗೂ ನಟನಾಗಿ 13 ಚಿತ್ರಗಳಲ್ಲಿ ನಟಿಸಿದ್ದಾರೆ. ಶ್ರಾವಣಮಾಸಂ ಅವರ ಕೊನೆಯ ಚಿತ್ರವಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.