ಭೀಮಾ-ಕೊರೆಗಾಂವ್ ಹಿಂಸಾಚಾರ ಸಂಬಂಧ ಬಂಧನ; ರೋಮಿಲಾ ಥಾಪರ್ ಸೇರಿ ಐವರು ಸುಪ್ರೀಂ ಮೊರೆ, ಇಂದು ಅರ್ಜಿ ವಿಚಾರಣೆ
ಭೀಮಾ ಕೊರೆಗಾಂವ್ ಹಿಂಸಾಕೃತ್ಯಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಪೊಲೀಸರು ದೇಶಾದ್ಯಂತ...

ನವದೆಹಲಿ: ಭೀಮಾ ಕೊರೆಗಾಂವ್ ಹಿಂಸಾಕೃತ್ಯಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಪೊಲೀಸರು ದೇಶಾದ್ಯಂತ ದಾಳಿ ನಡೆಸಿ ಮಾನವ ಹಕ್ಕುಗಳ ಹೋರಾಟ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಇತಿಹಾಸತಜ್ಞ ರೊಮಿಲಾ ತಾಪರ್ ಮತ್ತು ಇತರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಬಂಧಿಸಿರುವ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಅವರು ಕೋರಿದ್ದಾರೆ.
ಬಂಧನ ಘಟನೆ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಅರ್ಜಿದಾರರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ವ್ಯಾಪಕ ಬಂಧನ ಮಾಡಿದ್ದೇಕೆ ಎಂದು ಮಹಾರಾಷ್ಟ್ರ ಸರ್ಕಾರ ವಿವರಣೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಇಂದು ಅಪರಾಹ್ನ 3.45ಕ್ಕೆ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ಈ ಮಧ್ಯೆ, ಪುಣೆ ಪೊಲೀಸರು ತಮ್ಮನ್ನು ಬಂಧಿಸಿರುವ ಕ್ರಮ ಕಾನೂನುಬಾಹಿರ ಎಂದು ಅರ್ಜಿ ಸಲ್ಲಿಸಿರುವ ಮಾನವ ಹಕ್ಕುಗಳ ಹೋರಾಟಗಾರ ಗೌತಮ್ ನವ್ಲಖ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಇಂದು ಮಧ್ಯಾಹ್ನ 2.15ಕ್ಕೆ ನಡೆಸಲಿದೆ.
ದಾಖಲೆಗಳ ಅನುವಾದಿತ ಪ್ರತಿ ಇನ್ನೂ ಸಿದ್ದವಾಗಿಲ್ಲದಿರುವುದರಿಂದ 12 ಗಂಟೆಗೆ ನೀಡುವುದಾಗಿ ಮಹಾರಾಷ್ಟ್ರ ಪೊಲೀಸರು ದೆಹಲಿ ಹೈಕೋರ್ಟ್ ಗೆ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


