ಕಾಶ್ಮೀರದಲ್ಲಿ ಉಗ್ರ ದಾಳಿ: ಕನಿಷ್ಠ ನಾಲ್ವರು ಪೊಲೀಸರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ಬುಧವಾರ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ದಾಳಿ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ಬುಧವಾರ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ ನಾಲ್ವರು ಪೊಲೀಸರು ಹುತಾತ್ಮರಾಗಿದ್ದಾರೆ ಮತ್ತು ಓರ್ವ ಪೊಲೀಸ್ ಪೇದೆ ಗಾಯಗೊಂಡಿದ್ದಾರೆ.
ಅರಹಮಾ ಗ್ರಾಮಕ್ಕೆ ತೆರಳುತ್ತಿದ್ದ ಉಪ ಪೊಲೀಸ್ ಅಧೀಕ್ಷಕ(ಡಿಎಸ್ ಪಿ)ರ ಬೆಂಗಾವಲು ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಗಾಯಗೊಂಡ ಐವರು ಪೊಲೀಸರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಾಲ್ವರು ಹುತಾತ್ಮರಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಹುತಾತ್ಮ ಪೊಲೀಸ್ ಸಿಬ್ಬಂದಿಯನ್ನು ಮೊಹಮ್ಮದ್ ಇಖ್ಬಾಲ್, ಜಾವೇದ್ ಅಹಮ್ಮದ್, ಅದಿಲ್ ಅಹಮ್ಮದ್ ಎಂದು ಗುರುತಿಸಲಾಗಿದೆ.
ಉಗ್ರರು ಪೊಲೀಸರಿಂದ ಮೂರು ಎಕೆ 47ಗನ್ ಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೈಶ್ ಇ ಮೊಹಮ್ಮದ್ ಉಗ್ರ ದಾಳಿಯ ಹೊಣೆಹೊತ್ತುಕೊಂಡಿದ್ದು, ಉಗ್ರರಿಗಾಗಿ ಪೊಲೀಸರು ಮತ್ತು ಸೇನೆ ತೀವ್ರ ಶೋಧ ಕಾರ್ಯ ನಡೆಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


