ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್, 2 ಉಗ್ರರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆಮಾಡಿದೆ ಎಂದು ಬುಧವಾರ ತಿಳಿದುಬಂದಿದೆ...

Published On :
ಅನಂತ್'ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಅನಂತ್ ನಾಗ್ ಜಿಲ್ಲೆಯ ಮುನ್ವಾರ್ಡ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಇಂದು ಬೆಳಿಗ್ಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಸೇನೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಎನ್ ಕೌಂಟರ್ ನಡೆಸಲು ಮುಂದಾದ ಸೇನೆ ಇದೀಗ ಇಬ್ಬರು ಉಗ್ರರನ್ನು ಸದೆಬಡಿದಿದೆ ಎಂದು ವರದಿಗಳು ತಿಳಿಸಿವೆ.
ಹತ್ಯೆಯಾದ ಇಬ್ಬರ ಉಗ್ರರನ್ನು ಅಲ್ತಾಫ್ ಅಹ್ಮದ್ ದಾರ್ ಮತ್ತು ಉಮರ್ ರಶೀದ್ ವಾನಿ ಎಂದು ಗುರ್ತಿಸಲಾಗಿದ್ದು, ಇಬ್ಬರೂ ಉಗ್ರರು ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ತಿಳಿದುಬಂದಿದೆ.
ಎನ್ ಕೌಂಟರ್ ನಡೆದ ಸ್ಧಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ಸೇನೆ ವಶಕ್ಕೆ ಪಡೆದುಕೊಂಡಿದ್ದು, ಕಾರ್ಯಾಚರಣೆ ಮುಂದುವರೆಸಿದೆ ಎನ್ನಲಾಗುತ್ತಿದೆ. ಈ ನಡುವೆ ಯಾವುದೇ ರೀತಿಯ ವದಂತಿಗಲು ಹರಡದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು ಜಿಲ್ಲೆಯಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉಗ್ರರುAnantNagಜಮ್ಮು ಮತ್ತು ಕಾಶ್ಮೀರArmyJammu and Kashmirencounterterroristಸೇನೆಅನಂತ್ ನಾಗ್ ಜಿಲ್ಲೆಎನ್\'ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


