ರಾಫೆಲ್ ರಾಬರಿ: ಜಂಟಿ ಸಂಸದೀಯ ಸಮಿತಿಗೆ ವರದಿ ಒಪ್ಪಿಸಿ, 24 ಗಂಟೆಗಳಲ್ಲಿ ನನಗೆ ಉತ್ತರಿಸಿ: ಜೇಟ್ಲಿಗೆ ರಾಹುಲ್ ಸವಾಲು
ರಾಫೆಲ್ ಯುದ್ಧ ವಿಮಾನ ಖರೀದಿಯನ್ನು ರಾಬರಿ ಎಂದು ಬಣ್ಣಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡಲೇ ವಿವಾದವನ್ನು ಸಂಸದೀಯ ಸಮಿತಿಗೆ ಒಪ್ಪಿಸಿ ಎಂದು ಹೇಳಿ 24 ಗಂಟೆಗಳಲ್ಲಿ ಉತ್ತರಿಸಿ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಸವಾಲು ಹಾಕಿದ್ದಾರೆ.

Published On :
ನವದೆಹಲಿ: ರಾಫೆಲ್ ಯುದ್ಧ ವಿಮಾನ ಖರೀದಿಯನ್ನು ರಾಬರಿ ಎಂದು ಬಣ್ಣಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡಲೇ ವಿವಾದವನ್ನು ಸಂಸದೀಯ ಸಮಿತಿಗೆ ಒಪ್ಪಿಸಿ ಎಂದು ಹೇಳಿ 24 ಗಂಟೆಗಳಲ್ಲಿ ಉತ್ತರಿಸಿ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಸವಾಲು ಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಒಪ್ಪಂದದ ತನಿಖೆಗೆ ಜಂಟಿ ಸಂಸದೀಯ ಸಮಿತಿಯನ್ನು ರಚಿಸಲು ಒತ್ತಾಯಿಸಿರುವ ಅವರು ಇನ್ನು 24ಗಂಟೆಗಳಲ್ಲಿ ಈ ಬಗ್ಗೆ ಉತ್ತರಿಸಿ ಎಂದು ಒತ್ತಾಯಿಸಿದ್ದಾರೆ. 'ರಾಫೆಲ್ ರಾಬರಿ ಕುರಿತು ಮತ್ತೊಮ್ಮೆ ದೇಶದ ಜನರ ಗಮನ ಸೆಳೆದಿದ್ದಕ್ಕಾಗಿ ತಮಗೆ ಅಭಿನಂದನೆಗಳು. ರಾಫೆಲ್ ಒಪ್ಪಂದ ಪ್ರಕರಣದಲ್ಲಿ ತಮ್ಮ ಅತ್ಯುನ್ನತ ನಾಯಕರು (ನರೇಂದ್ರ ಮೋದಿ) ಅವರ ಸ್ನೇಹಿತರನ್ನು ರಕ್ಷಿಸಿಕೊಳ್ಳುತ್ತಿದ್ದಾರೆ. ಇದೇ ತೊಡಕಾಗಿದೆ. ಈ ಪ್ರಕರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿಯನ್ನು ರಚಿಸಲು ಸಾಧ್ಯವಿದೆಯೇ ಎಂಬುದನ್ನು ಪರಿಶೀಲಿಸಿ 24 ಗಂಟೆಗಳಲ್ಲಿ ಉತ್ತರಿಸಿ. ನಿಮ್ಮ ಉತ್ತರಕ್ಕಾಗಿ ಕಾಯುತ್ತಿರುತ್ತೇನೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಇನ್ನು ಇದೇ ರಾಫೆಲ್ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿರುವ ಅರುಣ್ ಜೇಟ್ಲಿ, ಕಾಂಗ್ರೆಸ್ ಪಕ್ಷಕ್ಕೆ 15 ಪ್ರಶ್ನೆಗಳನ್ನು ಎಸೆದಿದ್ದಾರೆ. ಅಲ್ಲದೇ ಇದೇ ವಿಚಾರವಾಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಅವರ ಮಾತುಗಳು ಬಾಲಿಶ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Arun Jaitleyಅರುಣ್ ಜೇಟ್ಲಿನವದೆಹಲಿCongressಕಾಂಗ್ರೆಸ್New DelhibjpಬಿಜೆಪಿRahul Gandhiರಾಹುಲ್ ಗಾಂಧಿRafale dealರಾಫೆಲ್ ವಿವಾದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


