ದೇಶ

ಆರ್'ಎಸ್ಎಸ್ ಸಿದ್ಧಾಂತ ದೇಶಕ್ಕೆ ವಿಷ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಮುಸ್ಲಿಂ ಬ್ರದರ್ ಹುಡ್'ನೊಂದಿಗೆ ತಳುಕು ಹಾಕಿ ಮಾತನಾಡಿದ್ದ ಬೆನ್ನಲ್ಲೇ ಅದೇ ರೀತಿಯಲ್ಲಿಯೇ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರೂ ಕೂಡ ಬುಧವಾರ ಮಾತನಾಡಿದ್ದಾರೆ...

ಆರ್'ಎಸ್ಎಸ್ ಸಿದ್ಧಾಂತ ದೇಶಕ್ಕೆ ವಿಷ: ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
Published On :
ಮುಂಬೈ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಮುಸ್ಲಿಂ ಬ್ರದರ್ ಹುಡ್'ನೊಂದಿಗೆ ತಳುಕು ಹಾಕಿ ಮಾತನಾಡಿದ್ದ ಬೆನ್ನಲ್ಲೇ ಅದೇ ರೀತಿಯಲ್ಲಿಯೇ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರೂ ಕೂಡ ಬುಧವಾರ ಮಾತನಾಡಿದ್ದಾರೆ. 
ಆರ್'ಎಸ್ಎಸ್ ಸಿದ್ಧಾಂತವನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಳವಡಿಸಿಕೊಳ್ಳುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅನುಸರಿಸುತ್ತಿದ್ದಾರೆ. ಇದು ದೇಶಕ್ಕೆ ವಿಷಕಾರಿಯಾಗಿದೆ ಎಂದು ಹೇಳಿದ್ದಾರೆ. 
ಬಿಜೆಪಿ ಆರ್'ಎಸ್ಎಸ್ ಸಿದ್ಧಾಂತವನ್ನು ಅಳವಡಿಸಿಕೊಳ್ಳುತ್ತಿದ್ದು, ಅದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಾರಿಗೆ ತರುತ್ತಿದ್ದಾರೆ. ಈ ಸಿದ್ಧಾಂತದ ವಿರುದ್ಧ ನಾವು ಹೋರಾಟ ನಡೆಸುತ್ತಿದ್ದೇವೆ. ಆರ್'ಎಸ್ಎಸ್ ಸಿದ್ಧಾಂತ ದೇಶಕ್ಕೆ ವಿಷಕಾರಿ ಎಂಬುದು ನಮಗೆ ಗೊತ್ತಿದೆ ಎಂದು ತಿಳಿಸಿದ್ದಾರೆ. 
ಯಾರಾದರೂ ಆ ವಿಷಯವನ್ನು ಪರೀಕ್ಷೆ ಮಾಡುತ್ತೇವೆಂದು ತಿಂದರೆ, ಅದರ ಫಲಿತಾಂಶ ಏನಾಗುತ್ತದೆ? ಇಂತಹ ವ್ಯಕ್ತಿತ್ವದ ವಿರುದ್ಧ ನಾವು ಹೋರಾಡುತ್ತಿದ್ದೇವೆ. ಮೋದಿ ವಿರುದ್ಧ ಹೋರಾಡುತ್ತಿದ್ದೇವೆ. ಅವರ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ. ನಮ್ಮ ಈ ಹೋರಾಟ ಹೀಗೆಯೇ ಮುಂದುವರೆಯಲಿದೆ ಎಂದಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಮಾತನಾಡಿದ್ದ ರಾಹುಲ್ ಗಾಂಧಿಯವರು ಆರ್'ಎಸ್ಎಸ್ ಅರಬ್ ರಾಷ್ಟ್ರಗಳಲ್ಲಿರುವ ಮುಸ್ಲಿಂ ಬ್ರದರ್ ಹುಡ್ ಸಂಘಟನೆಯ ಕಲ್ಪನೆಯನ್ನು ಹೋಲುತ್ತದೆ. ಅದು ಭಾರತದ ಸ್ವರೂಪವನ್ನೇ ಬದಲಿಸಲು ಯತ್ನಿಸುತ್ತದೆ ಎಂದು ಆರೋಪಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.