ದೇಶ

ಮಹಾ ಸರ್ಕಾರಕ್ಕೆ ಸುಪ್ರೀಂ ನೋಟಿಸ್, ಐವರು ಹೋರಾಟಗಾರರಿಗೆ ಗೃಹ ಬಂಧನ

ಭೀಮಾ-ಕೊರಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಹೋರಾಟಗಾರರನ್ನು ಬಂಧಿಸಿದ...

ಮಹಾ ಸರ್ಕಾರಕ್ಕೆ ಸುಪ್ರೀಂ ನೋಟಿಸ್, ಐವರು ಹೋರಾಟಗಾರರಿಗೆ ಗೃಹ ಬಂಧನ
ಬಂಧಿತ ಹೋರಾಟಗಾರರು
Published On :
ನವದೆಹಲಿ: ಭೀಮಾ-ಕೊರಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಹೋರಾಟಗಾರರನ್ನು ಬಂಧಿಸಿದ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನೋಟಿಸ್ ನೀಡಿದ್ದು, ಹೋರಾಟಗಾರರನ್ನು ಗೃಹ ಬಂಧನದಲ್ಲಿರಿಸುವಂತೆ ಆದೇಶಿಸಿದೆ.
ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣ ನಡೆದು ಒಂಬತ್ತು ತಿಂಗಳ ನಂದರ ಈಗ ಐವರು ಹೋರಾಟಗಾರರನ್ನು ಬಂಧಿಸಿದ ಮಹಾರಾಷ್ಟ್ರ ಪೊಲೀಸರ ಕ್ರಮವನ್ನು ಪ್ರಶ್ನಿಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ, ಸೆಪ್ಟೆಂಬರ್ 6ರ ವರೆಗೆ ಹೋರಾಟಗಾರರನ್ನು ಜೈಲಿಗೆ ಕಳುಹಿಸದೆ ಗೃಹ ಬಂಧನದಲ್ಲಿರಿಸುವಂತೆ ಆದೇಶಿಸಿದೆ.
ಅಸಮ್ಮತಿ ಎಂಬುದು ಪ್ರಜಾಪ್ರಭುತ್ವದ ಸುರಕ್ಷತಾ ಕವಚವಿದ್ದಂತೆ ಮತ್ತು ಒಂದು ವೇಳೆ ಈ ಸುರಕ್ಷತಾ ಕವಚಗಳಿಗೆ ಅವಕಾಶ ನೀಡದಿದ್ದರೆ ಅದು ಸ್ಫೋಟಗೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.
ನಿನ್ನೆ ಬಂಧನಕ್ಕೊಳಗಾಗಿದ್ದ ಕ್ರಾಂತಿಕಾರಿ ಬರಹಗಾರ ವರವರ ರಾವ್ ಸೇರಿದಂತೆ ಐವರು ಹೋರಾಟಗಾರರ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಈ ಸಂಬಂಧ  ಪ್ರತಿಕ್ರಿಯೆ ಸಲ್ಲಿಸುವಂತೆ ಮಹರಾಷ್ಟ್ರ ಸರ್ಕಾರ ಮತ್ತು ಪೊಲೀಸರಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್ 6ಕ್ಕೆ ಮುಂದೂಡಿದೆ.
ನಿನ್ನೆ ದೇಶದ ವಿವಿಧ ನಗರಗಳಲ್ಲಿ ದಾಳಿ ನಡೆಸಿದ್ದ ಪುಣೆ ಪೊಲೀಸರು, ಹೈದರಾಬಾದ್ ನಲ್ಲಿ ವರವರ ರಾವ್, ಮುಂಬೈನಲ್ಲಿ ಅರುಣ್ ಫೆರೀರಾ ಮತ್ತು ವರ್ನಾನ್ ಗೋನ್ಸಾಲ್ವೆಸ್, ಫರಿದಾಬಾದ್ ನಲ್ಲಿ ಸುಧಾ ಭಾರದ್ವಜ್ ಹಾಗೂ ದೆಹಲಿಯಲ್ಲಿ ಗೌತಮ್ ನವಲಾಖ ಅವರನ್ನು ಬಂಧಿಸಿದ್ದರು.
ಹೋರಾಟಗಾರರ ಬಂಧನ ಪ್ರಶ್ನಿಸಿ ಪ್ರಶಾಂತ್ ಭೂಷಣ್, ಅಭಿಷೇಕ್ ಮನುಸಿಂಘ್ವಿ ಮತ್ತು ಇಂದಿರಾ ಜೈಸಿಂಗ್ ಅವರು ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ಇಂದು ಬೆಳಗ್ಗೆ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.