ಬಿಹಾರ ಸ್ಥಾನ ಹಂಚಿಕೆ ಲೆಕ್ಕಾಚಾರ ಮುಂದಿಟ್ಟ ಬಿಜೆಪಿ: ಜೆಡಿಯು ಅಸಮಾಧಾನ
2019 ರ ಲೋಕಸಭಾ ಚುನಾವಣೆಗೆ ಬಿಹಾರದಲ್ಲಿ ಸ್ಥಾನ ಹಂಚಿಕೆ ಲೆಕ್ಕಾಚಾರವನ್ನು ಬಿಜೆಪಿ ಮುಂದಿಟ್ಟಿದೆ.

Published On :
ಪಾಟ್ನಾ: 2019 ರ ಲೋಕಸಭಾ ಚುನಾವಣೆಗೆ ಬಿಹಾರದಲ್ಲಿ ಸ್ಥಾನ ಹಂಚಿಕೆ ಲೆಕ್ಕಾಚಾರವನ್ನು ಬಿಜೆಪಿ ಮುಂದಿಟ್ಟಿದೆ.
ಬಿಹಾರದ 40 ಸ್ಥಾನಗಳ ಪೈಕಿ ಅತಿ ಹೆಚ್ಚು 20 ಸ್ಥಾನಗಳನ್ನು ತನ್ನ ಬಳಿ ಇಟ್ಟುಕೊಂಡು 12 ಸ್ಥಾನಗಳನ್ನು ಜೆಡಿಇಯುಗೆ ನೀಡುವ ಪ್ರಸ್ತಾವನೆ ಹೊರಹಾಕಿದೆ. ಉಳಿದ ಸ್ಥಾನಗಳು ರಾಮ್ ವಿಲಾಸ್ ಪಾಸ್ವಾನ್ ಅವರ ಎಲ್ ಜೆಪಿ, ಉಪೇಂದ್ರ ಕುಶ್ವಾ ಅವರ ಪಕ್ಷಕ್ಕೆ ಹಂಚಿಕೆಯಾಗಲಿದೆ.
ಬಿಜೆಪಿಯ ಈ ಪ್ರಸ್ತಾವನೆಗೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಯು, ಗೌರವಯುತವಾದ ಹಂಚಿಕೆಯ ಪ್ರಸ್ತಾವನೆಯಲ್ಲ ಎಂದು ಹೇಳಿದೆ. ಇದನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂಬುದು ಬಿಜೆಪಿಗೂ ಗೊತ್ತಿದೆ, ಎರಡೂ ಪಕ್ಷಗಳ ನಡುವೆ ಸಮಾನ ಹಂಚಿಕೆಯಾಗಬೇಕು ಎರಡೂ ಪಕ್ಷಗಳಿಗೆ ತಲಾ 17 ಸ್ಥಾನಗಳು ಹಂಚಿಕೆಯಾಗಬೇಕು ಹಾಗೂ ಉಳಿದ 6 ಸ್ಥಾನಗಳನ್ನು ರಾಮ್ ವಿಲಾಸ್ ಪಾಸ್ವಾನ್ ಹಾಗೂ ಉಳಿದ ಮೈತ್ರಿ ಪಕ್ಷಗಳ ನಡುವೆ ಹಂಚಿಕೆಯಾಗಬೇಕು ಎಂದು ಜೆಡಿಯು ನಾಯಕರು ಹೇಳಿದ್ದಾರೆ.
ಆದರೆ ಬಿಜೆಪಿ ನಾಯಕರ ಪ್ರಕಾರ ಇದು ಅಂತಿಮವಾದ ನಿರ್ಧಾರವಲ್ಲ, "ಇನ್ನೂ ಏನು ಅಂತಿಮಗೊಂಡಿಲ್ಲ, ಶೀಘ್ರವೇ ಅಂತಿಮಗೊಳಿಸಲಾಗುತ್ತದೆ ಎಂದು ಬಿಜೆಪಿ ನಾಯಕ ಭುಪೇಂದ್ರ ಯಾದವ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


