ಆರ್ ಎಸ್ ಎಸ್ ಆಹ್ವಾನವನ್ನು ಒಪ್ಪಿಕೊಳ್ಳದಂತೆ ರಾಹುಲ್ ಗಾಂಧಿಗೆ ಕಾಂಗ್ರೆಸ್ ಸಲಹೆ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ಒಪ್ಪಿಕೊಳ್ಳದಂತೆ ಹಿರಿಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಸಲಹೆ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ :ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ಒಪ್ಪಿಕೊಳ್ಳದಂತೆ ಹಿರಿಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಸಲಹೆ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮುಂದಿನ ತಿಂಗಳು ಸೆಪ್ಟೆಂಬರ್ 17 ರಿಂದ 19 ರವರೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಆಯೋಜಿಸಲಿರುವ ಸರಣಿ ಉಪನ್ಯಾಸ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸುವ ಸಾಧ್ಯತೆ ಇದೆ ಎಂಬಂತಹ ವರದಿಗಳ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಗೆ ಈ ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರನ್ನು ಹೊರತುಪಡಿಸಿ ಎಡಪಕ್ಷದ ಸೀತಾರಾಂ ಯೆಚೂರಿ ಮತ್ತಿತರ ವಿವಿಧ ವಿಚಾರಧಾರೆಗಳನ್ನು ಹೊಂದಿರುವ ನಾಯಕರನ್ನು ಆಹ್ವಾನಿಸಿ ಉಪನ್ಯಾಸ ನೀಡಿಸಲು ಆರ್ ಎಸ್ ಎಸ್ ಮುಂದಾಗಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


