ಏಕಕಾಲಕ್ಕೆ ಲೋಕಸಭೆ, ಆಸೆಂಬ್ಲಿ ಚುನಾವಣೆ ಪ್ರಸ್ತಾವಕ್ಕೆ ಕಾನೂನು ಆಯೋಗ ಅನುಮೋದನೆ: ಸರ್ಕಾರಕ್ಕೆ ಕರಡು ವರದಿ
ನಿರಂತರ ಚುನಾವಣಾ ಪ್ರಕ್ರಿಯೆ ತಡೆಗಟ್ಟಲು ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ನಡೆಸುವುದು ಪರಿಹಾರವಾಗಲಿದೆ ಎಂದು ಕರಡು ವರದಿಯಲ್ಲಿ ತಿಳಿಸಿರುವ ಕಾನೂನು ಆಯೋಗ, ಚುನಾವಣಾ ಕಾನೂನು ಪ್ರಕ್ರಿಯೆ ಹಾಗೂ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಶಿಫಾರಸ್ಸು ಮಾಡಿದೆ.

ನವದೆಹಲಿ:ನಿರಂತರ ಚುನಾವಣಾ ಪ್ರಕ್ರಿಯೆ ತಡೆಗಟ್ಟಲು ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ನಡೆಸುವುದು ಪರಿಹಾರವಾಗಲಿದೆ ಎಂದು ಕರಡು ವರದಿಯಲ್ಲಿ ತಿಳಿಸಿರುವ ಕಾನೂನು ಆಯೋಗ, ಚುನಾವಣಾ ಕಾನೂನು ಪ್ರಕ್ರಿಯೆ ಹಾಗೂ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಶಿಫಾರಸ್ಸು ಮಾಡಿದೆ.
ಜಮ್ಮು ಮತ್ತು ಕಾಶ್ಮೀರ ಹೊರತುಪಡಿಸಿ ಉಳಿದ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವಂತೆ ಶಿಫಾರಸು ಮಾಡಿರುವ ಆಯೋಗ ಕರಡು ವರದಿಯನ್ನು ಕಾನೂನು ಸಚಿವಾಲಯಕ್ಕೆ ಸಲ್ಲಿಸಿದೆ.
ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ ಸಾರ್ವಜನಿಕರ ಹಣ ಉಳಿತಾಯವಾಗುತ್ತದೆ. ಭದ್ರತಾ ಪಡೆ ಹಾಗೂ ಆಡಳಿತಾತ್ಮಕ ವ್ಯವಸ್ಥೆಯಲ್ಲಿನ ಹೊರೆಯನ್ನು ಕಡಿಮೆ ಮಾಡಲು ನೆರವಾಗುತ್ತದೆ. ಸರ್ಕಾರದ ನೀತಿಗಳನ್ನು ಉತ್ತಮವಾಗಿ ಅನುಷ್ಠಾನಗಳಿಸಬಹುದಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ ದೇಶದಲ್ಲಿನ ಆಡಳಿತಾತ್ಮಕ ಯಂತ್ರ ಚುನಾವಣೆ ಬದಲಿಗೆ ನಿರಂತರವಾಗಿ ಅಭಿವೃದ್ದಿ ಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತದೆ. ಆದಾಗ್ಯೂ, ಅಸ್ತಿತ್ವದಲ್ಲಿರುವ ಸಂವಿಧಾನದ ಚೌಕಟ್ಟಿನೊಳಗೆ ಏಕಕಾಲಿಕ ಚುನಾವಣೆ ನಡೆಸುವುದು ಕಷ್ಟಸಾಧ್ಯ ಎಂದು ಕಾನೂನು ಆಯೋಗ ತನ್ನ ಕರಡು ವರದಿಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


