ಬಿಜೆಪಿ ಮತ್ತು ಎಐಎಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸುವುದೇ ನಮ್ಮ ಗುರಿ: ಎಂಕೆ ಸ್ಟಾಲಿನ್
ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಮತ್ತು ತಮಿಳುನಾಡಿನಲ್ಲಿ ಎಐಎಡಿಎಂಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ...

ಚೆನ್ನೈ: ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಮತ್ತು ತಮಿಳುನಾಡಿನಲ್ಲಿ ಎಐಎಡಿಎಂಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, ಎರಡೂ ಸರ್ಕಾರಗಳನ್ನು ಅಧಿಕಾರದಿಂದ ಕಿತ್ತೊಗೆಯುವುದು ತಮ್ಮ ಪಕ್ಷದ ಎರಡು ಪ್ರಮುಖ ಗುರಿ ಎಂದು ಹೇಳಿದ್ದಾರೆ.
ಬಿಜೆಪಿ ಮತ್ತು ಎಐಎಡಿಎಂಕೆ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿರುವ ಅವರು, ನಮ್ಮ ಮುಂದೆ ಎರಡು ತಕ್ಷಣದ ಗುರಿಯಿದೆ. ಒಂದು ಜನಬೆಂಬಲದೊಂದಿಗೆ ಎಐಎಡಿಎಂಕೆ ಸರ್ಕಾರ ವಿರುದ್ಧ ಹೋರಾಡುವುದು, ಅದು ಸರ್ಕಾರದ ಬೊಕ್ಕಸವನ್ನು ಬರಿದು ಮಾಡುತ್ತಿದೆ, ಇನ್ನೊಂದು ದೇಶವನ್ನು ಸಂಪೂರ್ಣ ಕೇಸರೀಕರಣಗೊಳಿಸಲು ಹೊರಟಿರುವ ಬಿಜೆಪಿ ನೇತೃತ್ವದ ಸರ್ಕಾರವನ್ನು ಸಂಪೂರ್ಣವಾಗಿ ಸೋಲಿಸುವುದು. ಎನ್ ಡಿಎ ಸರ್ಕಾರ ವೈವಿಧ್ಯತೆಯ ಧ್ಯೇಯವನ್ನು ನಾಶಪಡಿಸಲು ಹೊರಟಿದೆ. ಧಾರ್ಮಿಕ ಮತಾಂಧತೆಯನ್ನು ಜನರ ಮೇಲೆ ಹೇರುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಮತ್ತು ಎಐಎಡಿಎಂಕೆಯನ್ನು ಸೋಲಿಸಲು ಚುನಾವಣೆ ಒಳ್ಳೆಯ ಅವಕಾಶವಾಗಿದೆ ಎಂದರು. ತಮ್ಮ ಮೈತ್ರಿ ಪಕ್ಷಗಳ ನಡುವೆ ಬಿರುಕು ಮತ್ತು ಭಿನ್ನಾಭಿಪ್ರಾಯ ಮೂಡಿಸಲು ನಡೆಸುವ ಪ್ರಯತ್ನ ಫಲಗೂಡುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


